ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!

Updated on: May 10, 2026 | 1:02 PM

ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ದಶಕಗಳ ಕಾಲ ಆಳಿದ್ದ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ಭೇದಿಸಿದ ಟಿವಿಕೆ (TVK) ಮುಖ್ಯಸ್ಥ ದಳಪತಿ ವಿಜಯ್ ಇಂದು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ನೆಹರು ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಚೆನ್ನೈ, ಮೇ 10: ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ದಶಕಗಳ ಕಾಲ ಆಳಿದ್ದ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ಭೇದಿಸಿದ ಟಿವಿಕೆ (TVK) ಮುಖ್ಯಸ್ಥ ದಳಪತಿ ವಿಜಯ್ ಇಂದು ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ನೆಹರು ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ಪ್ರಮಾಣವಚನಕ್ಕೂ ಮುನ್ನ ಭಾಷಣ ಮಾಡಿದ ವಿಜಯ್, ಇಂದು ನಾನು ಇಲ್ಲಿ ನಿಂತಿರುವುದು ಒಬ್ಬ ನಟನಾಗಿ ಅಲ್ಲ, ನಿಮ್ಮ ಮನೆಯ ಮಗನಾಗಿ. ಈ ಮಣ್ಣಿನ ಜನರ ಆಶೀರ್ವಾದದಿಂದ ನಾನು ಇಂದು ಈ ಜವಾಬ್ದಾರಿಯನ್ನು ಹೊರುತ್ತಿದ್ದೇನೆ. ನಮ್ಮ ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಇದು ಕೇವಲ ಒಂದು ಬದಲಾವಣೆಯಲ್ಲ, ಇದು ಹೊಸ ಪರ್ವದ ಆರಂಭ. ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕ ಆಡಳಿತ ನೀಡುವುದು ನನ್ನ ಮೊದಲ ಗುರಿ. ಜನಸಾಮಾನ್ಯರ ಒಂದು ರೂಪಾಯಿ ಕೂಡ ವ್ಯರ್ಥವಾಗದಂತೆ ನಾನು ನೋಡಿಕೊಳ್ಳುತ್ತೇನೆ. ತಮಿಳುನಾಡಿನ ಪ್ರತಿಯೊಬ್ಬ ನಾಗರಿಕನಿಗೂ ಸಾಮಾಜಿಕ ನ್ಯಾಯ ಸಿಗುವಂತೆ ಮಾಡುವುದೇ ನನ್ನ ಈ ಪಯಣದ ಉದ್ದೇಶ. ನಿಮ್ಮ ಪ್ರೀತಿ ಮತ್ತು ಬೆಂಬಲ ಹೀಗೆಯೇ ಇರಲಿ. ವಾಳಗ ತಮಿಳಗಂ (ತಮಿಳುನಾಡು ಬಾಳಲಿ)! ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More