ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಆಹ್ವಾನವಿಲ್ಲ: ಪ್ರಲ್ಹಾದ್ ಜೋಶಿ

|

Updated on: Jan 02, 2024 | 1:18 PM

ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಆಹ್ವಾನಿಸದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ, ಕಾರ್ಯಕ್ರಮದಲ್ಲಿ ಸ್ಥಳದ ಅಭಾವ ಕಾರಣ ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳನ್ನೂ ಆಹ್ವಾನಿಸಿಲ್ಲ, ಇದರಲ್ಲಿ ರಾಜಕೀಯವೇನೂ ಇಲ್ಲ, ಆಹ್ವಾನಗಳನ್ನು ನೀಡಿದ್ದು ರಾಮಮಂದಿರ ಟ್ರಸ್ಟ್ ಎಂದು ಹೇಳಿದರು.

ವಿಜಯಪುರ: ಶ್ರೀ ಸಿದ್ದೇಶ್ವರ ಸ್ವಾಮಿಗಳು ಲಿಂಗೈಕ್ಯರಾಗಿ ಒಂದು ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜ್ಞಾನ ಯೋಗಾಶ್ರಮ ನಡೆಯಲಿರುವ ಗುರುನಮನ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಚಾಪರೊಂದರಲ್ಲಿ ಆಗಮಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಸೈನಿಕ್ ಶಾಲೆಯ (Sainik School) ಆವರಣದಲ್ಲಿರುವ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠೆ (Ram Temple Consecration Ceremony) ನಡೆಯಲಿರುವುರಿಂದ ಹಿಂದೂಗಳ ಒಲವು ತಮ್ಮೊಂದಿಗಿರದು ಎನ್ನುವ ಕಾರಣ ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸ್ಲಿಂರನ್ನು ಓಲೈಸಿಕೊಳ್ಳಲು ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ ಎಂದು ಜೋಶಿ ಹೇಳಿದರು. ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಆಹ್ವಾನಿಸದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ, ಕಾರ್ಯಕ್ರಮದಲ್ಲಿ ಸ್ಥಳದ ಅಭಾವ ಕಾರಣ ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳನ್ನೂ ಆಹ್ವಾನಿಸಿಲ್ಲ ಎಂದು ಹೇಳಿ ಭಾರತ ಸರ್ಕಾರದಲ್ಲಿ ಸಚಿವನಾಗಿರುವ ತನಗೂ ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ