ತುಮಕೂರು: ಹಂಡೆಯೊಳಗಿದ್ದ ನಾಗರಹಾವು ರಕ್ಷಣೆ, ನಿಟ್ಟುಸಿರುಬಿಟ್ಟ ಮನೆಯವರು

Edited By:

Updated on: May 12, 2024 | 8:36 AM

ತುಮಕೂರು ತಾಲೂಕಿನ ಸೀಬಿ ಅಗ್ರಹಾರ ಗ್ರಾಮದ ನಿವಾಸಿ ರಮೇಶ್ ಎಂಬುವವರ ಮನೆಯ ಹಂಡೆ ಒಲೆ ಒಳಗೆ‌ ಅಡಗಿದ್ದ ನಾಗರ ಹಾವನ್ನು ರಕ್ಷಣೆ ಮಾಡಲಾಗಿದೆ. ಸುಮಾರು 4 ಅಡಿ ಉದ್ದದ ನಾಗರಹಾವನ್ನು ಉರಗ ತಜ್ಞ ಮನು ಅಗ್ನಿವಂಶಿ ಸುರಕ್ಷಿತವಾಗಿ ರಕ್ಷಿಸಿ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

ತುಮಕೂರು, ಮೇ.12: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು ಮನೆಗಳಲ್ಲಿ, ವಾಹನಗಳ ಒಳಗೆ ಹಾವುಗಳು ಕಾಣಿಸಿಕೊಳ್ಳುತ್ತಿವೆ. ನೀರು ಬಿಸಿ ಮಾಡುವ ಹಂಡೆಯೊಳಗಿದ್ದ ನಾಗರಹಾವನ್ನು ರಕ್ಷಣೆ ಮಾಡಲಾಗಿದೆ. ತಾಲೂಕಿನ ಸೀಬಿ ಅಗ್ರಹಾರ ಗ್ರಾಮದ ನಿವಾಸಿ ರಮೇಶ್ ಎಂಬುವವರ ಮನೆಯ ಹಂಡೆ ಒಲೆ ಒಳಗೆ‌ ಅಡಗಿದ್ದ ನಾಗರ ಹಾವನ್ನು ರಕ್ಷಣೆ ಮಾಡಲಾಗಿದೆ. ಸುಮಾರು 4 ಅಡಿ ಉದ್ದದ ನಾಗರಹಾವನ್ನು ಕಂಡು‌ ಮನೆಯವರು ಬೆಚ್ಚಿಬಿದ್ದಿದ್ದರು.

ತಕ್ಷಣ ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯವರಿಗೆ (ವಾರ್ಕೊ) ಕರೆಮಾಡಿ ಮಾಹಿತಿ ನೀಡಿದ್ದು ಸಂಸ್ಥೆಯ ಉರಗ ತಜ್ಞ ಮನು ಅಗ್ನಿವಂಶಿ, ನಾಗರ ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಹಾವುಗಳ ರಕ್ಷಣೆ ಮಾಡಲು ವಾರ್ಕೊ ಸಂಸ್ಥೆಯ ಸಹಾಯವಾಣಿ 9964519576 ಕರೆ ಮಾಡಬಹುದು ಎಂದು ಉರಗ ತಜ್ಞ ಮನು ತಿಳಿಸಿದ್ದಾರೆ. ಸದ್ಯ ಮನೆಯವರು ನಿಟ್ಟುಸಿರು ಬಿಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More