ಟೆರರ್ ಆಗಬೇಕಿದ್ದ ಕಾಕ್ರೋಚ್ ಸುಧಿ ಕಾಮಿಡಿ ಮಾಡಿದ್ದೇ ಹೆಚ್ಚು; ವಿಡಿಯೋ ನೋಡಿ..

Updated on: Oct 12, 2025 | 7:05 PM

ನಟ ಕಾಕ್ರೋಚ್ ಸುಧಿ ಅವರು ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿ ಸೈ ಎನಿಸಿಕೊಂಡವರು. ಬಿಗ್ ಬಾಸ್ ಮನೆಗೆ ಕಾಲಿಟ್ಟ ಅವರ ಮೇಲೆ ಸಖತ್ ಭರವಸೆ ಇಟ್ಟುಕೊಳ್ಳಲಾಗಿದೆ. ಆದರೆ ಅವರು ಕಾಮಿಡಿ ಮಾಡುವುದರಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಹೊಸ ಪ್ರೋಮೋ ಇಲ್ಲಿದೆ ನೋಡಿ..

ನಟ ಕಾಕ್ರೋಚ್ ಸುಧಿ (Cockroach Sudhi) ಅವರು ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿ ಸೈ ಎನಿಸಿಕೊಂಡವರು. ಬಿಗ್ ಬಾಸ್ (Bigg Boss Kannada Season 12) ಮನೆಗೆ ಕಾಲಿಟ್ಟ ಅವರ ಮೇಲೆ ಸಖತ್ ಭರವಸೆ ಇಟ್ಟುಕೊಳ್ಳಲಾಗಿದೆ. ಆದರೆ ಅವರು ಕಾಮಿಡಿ ಮಾಡುವುದರಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಅಸುರಾಧಿಪತಿ ಪಟ್ಟ ಕೊಟ್ಟರೂ ಕೂಡ ಅದನ್ನು ಖಡಕ್ ಆಗಿ ನಿಭಾಯಿಸಲು ಅವರಿಂದ ಸಾಧ್ಯ ಆಗಲಿಲ್ಲ. ಈಗ ಅವರು ಭಾನುವಾರದ ಸಂಚಿಕೆಯಲ್ಲೂ ಕಾಮಿಡಿ ಮಾಡಿದ್ದಾರೆ. ಕಾಕ್ರೋಚ್ ಸುಧಿ ಅವರ ಮಾತು ಕೇಳಿ ಕಿಚ್ಚ ಸದೀಪ್ (Kichcha Sudeep) ಅವರು ಬಿದ್ದು ಬಿದ್ದು ನಕ್ಕಿದ್ದಾರೆ. ಅಕ್ಟೋಬರ್ 12ರ ಸಂಚಿಕೆಯ ಪ್ರೋಮೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More