‘ದಿ ಡೆವಿಲ್’ ಸಿನಿಮಾದಲ್ಲೂ ಗಿಲ್ಲಿ ಹವಾ: ಕಾಕ್ರೋಚ್ ಸುಧಿ ಹೇಳೋದೇನು?

Edited By:

Updated on: Dec 07, 2025 | 10:30 AM

ಬಿಗ್ ಬಾಸ್ ಮನೆಯಿಂದ ಕಾಕ್ರೋಚ್ ಸುಧಿ ಹೊರಬಂದ ನಂತರ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಟಿವಿ9 ಜತೆ ಮಾತಿಗೆ ಸಿಕ್ಕಿದ್ದಾರೆ. ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟ ಬಗ್ಗೆ ಸುಧಿ ಮಾತಾಡಿದ್ದಾರೆ. ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದಲ್ಲಿ ಗಿಲ್ಲಿ ನಟ ಪಾತ್ರ ಮಾಡಿದ್ದಾರೆ.

ನಟ ಕಾಕ್ರೋಚ್ ಸುಧಿ (Cockroach Sudhi) ಅವರು ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಟಿವಿ9 ಜೊತೆ ಮಾತಿಗೆ ಸಿಕ್ಕಿದ್ದಾರೆ. ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟ (Gilli Nata) ಬಗ್ಗೆ ಸುಧಿ ಮಾತಾಡಿದ್ದಾರೆ. ದರ್ಶನ್ ಅಭಿನಯದ ‘ದಿ ಡೆವಿಲ್’ (The Devil Movie) ಸಿನಿಮಾದಲ್ಲಿ ಗಿಲ್ಲಿ ನಟ ಒಂದು ಪಾತ್ರ ಮಾಡಿದ್ದಾರೆ. ಸಿನಿಮಾದ ಟ್ರೇಲರ್​​ನಲ್ಲಿ ಕೂಡ ಅವರು ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ತಮಗೆ ಬಹಳ ಸಂತೋಷ ಇದೆ ಎಂದು ಕಾಕ್ರೋಚ್ ಸುಧಿ ಹೇಳಿದ್ದಾರೆ. ‘ಗಿಲ್ಲಿ ಗೆದ್ದರೆ ನನಗೆ ಖುಷಿ. ಅವನು ಟ್ರೇಲರ್​​ನಲ್ಲಿ ಕಾಣಿಸಿಕೊಂಡಿದ್ದು ಖುಷಿ. ನಮಗೆ ನಮ್ಮ ಸ್ನೇಹಿತ ಎಲ್ಲೋ ಒಂದು ಕಡೆ ಬರುತ್ತಾನೆ ಎಂದಾಗ ಸಂತೋಷ ಆಗುತ್ತದೆ. ನಮಗೂ ಕೂಡ ನಮ್ಮ ಪೋಸ್ಟರ್ ಎಲ್ಲೋ ಮೂಲೆಯಲ್ಲಿ ಬಂದಾಗ ಅಷ್ಟೇ ಖುಷಿ ಆಗುತ್ತಿತ್ತು’ ಎಂದು ಕಾಕ್ರೋಚ್ ಸುಧಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More