Loading video

ನೀತಿ ಸಂಹಿತೆ: ಸಿಎಂ ಸಿದ್ದರಾಮಯ್ಯ, ಸಚಿವ ಭೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಕಾರು ತಪಾಸಣೆ ಮಾಡಿದ ಅಧಿಕಾರಿಗಳು

| Updated By: ಗಂಗಾಧರ​ ಬ. ಸಾಬೋಜಿ

Updated on: Mar 31, 2024 | 8:58 PM

ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಭೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಕಾರನ್ನು ಕೋಲಾರದ ಗಡಿ ರಾಮಸಂದ್ರ ಬಳಿ ತಪಾಸಣೆ ಮಾಡಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಡಿಸಿ ಅಕ್ರಂ ಪಾಷಾ ನೇತೃತ್ವದಲ್ಲಿ ಅಧಿಕಾರಿಗಳು ಕಾರು ತಪಾಸಣೆ ಮಾಡಿದ್ದಾರೆ.

ಕೋಲಾರ, ಮಾರ್ಚ್​ 31: ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಸಚಿವ ಭೈರತಿ ಸುರೇಶ್‌ ಪ್ರಯಾಣಿಸುತ್ತಿದ್ದ ಕಾರನ್ನು ಕೋಲಾರದ ಗಡಿ ರಾಮಸಂದ್ರ ಬಳಿ ತಪಾಸಣೆ ಮಾಡಲಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಡಿಸಿ ಅಕ್ರಂ ಪಾಷಾ ನೇತೃತ್ವದಲ್ಲಿ ಅಧಿಕಾರಿಗಳು ಕಾರು ತಪಾಸಣೆ ಮಾಡಿದ್ದಾರೆ. ಕೋಲಾರ ಹೊರವಲಯದ ನಂದಿನಿ ಪ್ಯಾಲೇಸ್‌ನಲ್ಲಿ ನಡೆದ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ ಸಹೋದರ ಮಗಳ ಮದುವೆಗೆ ಹೋಗಿದ್ದ ಸಿಎಂ, ಗೃಹ ಸಚಿವ ಪರಮೇಶ್ವರ್‌ ವಧು-ವರರಿಗೆ ಶುಭಾಶಯ ಕೋರಿದ್ದಾರೆ. ಈ ವೇಳೆ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಗೌತಮ್‌ ಸೇರಿ ಹಲವು ನಾಯಕರು ಭಾಗಿ ಆಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Mar 31, 2024 08:57 PM