Video: ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು

Updated on: Dec 30, 2025 | 10:57 AM

ಉತ್ತರಾಖಂಡದ ನೈನಿತಾಲ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಟ್ಯಾಕ್ಸಿ ಚಾಲಕನೊಬ್ಬ ನಿಲ್ಲಿಸಿದ್ದ ಕಾರಿನೊಳಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ವಾಹನದೊಳಗೆ ಬೆಚ್ಚಗಿರಲು ಆ ವ್ಯಕ್ತಿ ಸಣ್ಣ ಬೆಂಕಿ ಹಾಗೂ ಹೊಗೆ ಬರುವ ಸಾಧನವನ್ನು ಕಾರಿನೊಳಗೆ ಇಟ್ಟು ಮಲಗಿದ್ದರು. ವಿಷಕಾರಿ ಅನಿಲವನ್ನು ಉಸಿರಾಡಿ ಅವರು ಪ್ರಾಣ ಕಳೆದುಕೊಂಡಿದ್ದಾರೆ.

ನೈನಿತಾಲ್, ಡಿಸೆಂಬರ್ 30: ಉತ್ತರಾಖಂಡದ ನೈನಿತಾಲ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಟ್ಯಾಕ್ಸಿ ಚಾಲಕನೊಬ್ಬ ನಿಲ್ಲಿಸಿದ್ದ ಕಾರಿನೊಳಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ವಾಹನದೊಳಗೆ ಬೆಚ್ಚಗಿರಲು ಆ ವ್ಯಕ್ತಿ ಸಣ್ಣ ಬೆಂಕಿ ಹಾಗೂ ಹೊಗೆ ಬರುವ ಸಾಧನವನ್ನು ಕಾರಿನೊಳಗೆ ಇಟ್ಟು ಮಲಗಿದ್ದರು. ವಿಷಕಾರಿ ಅನಿಲವನ್ನು ಉಸಿರಾಡಿ ಅವರು ಪ್ರಾಣ ಕಳೆದುಕೊಂಡಿದ್ದಾರೆ.

ಕಾರಿನೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಟ್ಯಾಕ್ಸಿ ಚಾಲಕ ಪತ್ತೆಯಾಗಿದ್ದಾರೆ. ಕಾರ್ಬನ್ ಮಾನಾಕ್ಸೈಡ್ ಹೊಗೆಯಿಂದ ಉಂಟಾಗುವ ಮಾರಕ ಅಪಾಯದ ಅರಿವಿಲ್ಲದೆ ಚಾಲಕ ಮುಚ್ಚಿದ ಕಾರಿನೊಳಗೆ ಬ್ರೇಜಿಯರ್ ಉರಿಸಿದ್ದರು ಎನ್ನಲಾಗಿದೆ. ಮೃತರನ್ನು ಉತ್ತರ ಪ್ರದೇಶದ ಟ್ಯಾಕ್ಸಿ ಚಾಲಕ ಮತ್ತು ಮಥುರಾ ಜಿಲ್ಲೆಯ ಸಿರೋಹಾ ಯಮುನಾಪರ್ ನಿವಾಸಿ ಮನೀಶ್ ಗಂಧರ್ ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More