ಸ್ಫೋಟಕ ಸೆಂಚುರಿ ಸಿಡಿಸಿದ ಕಾಲಿನ್ ಮನ್ರೊ: ನೈಟ್ ರೈಡರ್ಸ್​ಗೆ ರೋಚಕ ಜಯ

Updated on: Aug 18, 2025 | 7:55 AM

St Kitts and Nevis Patriots vs Trinbago Knight Riders: ಕಾಲಿನ್ ಮನ್ರೊ (120) ಅವರ ಈ ಭರ್ಜರಿ ಶತಕದ ನೆರವಿನೊಂದಿಗೆ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 231 ರನ್​ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಸೇಂಟ್ ಕಿಟ್ಸ್ ಅ್ಯಂಡ ನೆವಿಸ್ ಪೇಟ್ರಿಯಾಟ್ಸ್ ತಂಡದ ಕೈಲ್ ಮೇಯರ್ಸ್ 32 ರನ್​ ಗಳಿಸಿದರೆ, ಆ್ಯಂಡ್ರೆ ಫ್ಲೆಚರ್ 41 ರನ್ ಬಾರಿಸಿದರು.

ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಸೇಂಟ್ ಕಿಟ್ಸ್​ನ ವಾರ್ನರ್ ಪಾರ್ಕ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೇಂಟ್ ಕಿಟ್ಸ್ ಅ್ಯಂಡ ನೆವಿಸ್ ಪೇಟ್ರಿಯಾಟ್ಸ್ ತಂಡದ ನಾಯಕ ಜೇಸನ್ ಹೋಲ್ಡರ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಟ್ರಿನ್‌ಬಾಗೊ ನೈಟ್ ರೈಡರ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಕಾಲಿನ್ ಮನ್ರೊ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಇತ್ತು ನೀಡಿದ ಎಡಗೈ ದಾಂಡಿಗ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 57 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 120 ರನ್​ ಬಾರಿಸಿದರು.

ಕಾಲಿನ್ ಮನ್ರೊ (120) ಅವರ ಈ ಭರ್ಜರಿ ಶತಕದ ನೆರವಿನೊಂದಿಗೆ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 231 ರನ್​ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಸೇಂಟ್ ಕಿಟ್ಸ್ ಅ್ಯಂಡ ನೆವಿಸ್ ಪೇಟ್ರಿಯಾಟ್ಸ್ ತಂಡದ ಕೈಲ್ ಮೇಯರ್ಸ್ 32 ರನ್​ ಗಳಿಸಿದರೆ, ಆ್ಯಂಡ್ರೆ ಫ್ಲೆಚರ್ 41 ರನ್ ಬಾರಿಸಿದರು. ಇನ್ನು ಜೇಸನ್ ಹೋಲ್ಡರ್ 44 ರನ್​ ಸಿಡಿಸಿದರು.

ಈ ಭರ್ಜರಿ ಬ್ಯಾಟಿಂಗ್ ಹೊರತಾಗಿಯೂ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 219 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು 12 ರನ್​ಗಳ ರೋಚಕ ಜಯ ಸಾಧಿಸಿದೆ.

 

Published on: Aug 18, 2025 07:55 AM