ಎಂಟು ಜನರನ್ನು ಬಲಿಪಡೆದ ಬಾಬುಸಾಪಾಳ್ಯ ಕಟ್ಟಡದ ಸ್ಥಿತಿ ಈಗ ಹೇಗಿದೆ ಅಂತ ನೋಡಿ
ನಾವು ಈಗಾಗಲೇ ವರದಿ ಮಾಡಿರುವಂತೆ ಕಟ್ಟಡದ ಮಾಲೀಕ ಮತ್ತು ಗುತ್ತಿಗೆದಾರನನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅನುಮತಿ ನೀಡಿದ ಬಿಬಿಎಂಪಿ ಅಧಿಕಾರಿಗಳನ್ನು ವಿರುದ್ಧ ಕಠಿಣ ಕ್ರಮ ಜರುಗಿಸಿದರೂ ನಗರದಲ್ಲಿ ಇಂಥ ದುರಂತಗಳು ಕೊನೆಯಾಗುವ ನಿರೀಕ್ಷೆ ಇಲ್ಲ.
ಬೆಂಗಳೂರು: ಹೆಣ್ಣೂರು ಮುಖ್ಯರಸ್ತೆಯಲ್ಲಿರುವ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಎರಡು ದಿನಗಳಾಯಿತು. ಕುಸಿದ ಕಟ್ಟಡದ ಅವಶೇಷಗಳನ್ನು ಇಲ್ಲಿ ನೋಡಬಹುದು. ಈ ದುರಂತದಲ್ಲಿ 8 ಜನ ಸಾವಿಗೀಡಾಗಿದ್ದಾರೆ. ಯಾರಿಗ್ಗೊತ್ತು ಅವಶೇಷಗಳನ್ನು ಸರಿಸುವಾಗ ಮತ್ತಷ್ಟು ಮೃತದೇಹಗಳು ಪತ್ತೆಯಾದರೆ ಆಶ್ಚರ್ಯವಿಲ್ಲ. ನಾಲ್ಕು ಅಂತಸ್ತಿನ ಕಟ್ಟಡದ ಅನುಮತಿ ಪಡೆದಿದ್ದ ಮಾಲೀಕ ಆರು ಅಂತಸ್ತುಗಳನ್ನು ಕಟ್ಟಲಾರಂಭಿಸಿದ್ದು ಕುಸಿತಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬಾಬುಸಾಬ್ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣ: ಕರ್ತವ್ಯಲೋಪ ಹಿನ್ನೆಲೆ ಬಿಬಿಎಂಪಿ ಅಧಿಕಾರಿ ಅಮಾನತು
Latest Videos

ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!

Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ

‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?

VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
