ಮೇಲ್ ಕಳಿಸಿದವರನ್ನು ಬೇಗ ಪತ್ತೆ ಮಾಡುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ: ಸಿದ್ದರಾಮಯ್ಯ, ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಜಿ ಪರಮೇಶ್ವರ್ ಬಾಂಬ್ ಬೆದರಿಕೆಯ ಪ್ರಕರಣವನ್ನು ಹಗುರವಾಗಿ ಪರಿಗಣಿಸಬಾರದೆಂದು ಆತಂಕು ಪೋಷಕರು ವಿನಂತಿ ಮಾಡಿಕೊಳ್ಳುತ್ತಿದ್ದಾರೆ. ಆವರ ಆತಂಕ ಮತ್ತು ಭಯ ಸಹಜವಾದದ್ದೇ. ಅವರು ಮತ್ತು ಮಕ್ಕಳಲ್ಲಿ ಉಂಟಾಗಿದ್ದ ಆತಂಕವನ್ನು ಶಬ್ದಗಳಲ್ಲಿ ಹೇಳಲಾಗದು.
ಬೆಂಗಳೂರು: ನಗರದ 44 ಶಾಲೆಗಳಿಗೆ ಬಾಂಬ್ ಬೆದರಿಕೆ (Bomb threats) ಸಂದೇಶ ರವಾನೆಯಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣ ವಲಯದ 32 ಶಾಲೆ ಮತ್ತು ಉತ್ತರ ವಲಯ ವ್ಯಾಪ್ತಿಯಲ್ಲಿ ಒಟ್ಟು 7 ಶಾಲೆ ಹಾಗೂ ಬೆಂಗಳೂರು ನಗರ ಜಿಲ್ಲೆ ಆನೇಕಲ್ (Anekal) ತಾಲೂಕಿನಲ್ಲಿ 5 ಶಾಲೆಗಳಿಗೆ ಬೆದರಿಕೆಯ ಈಮೇಲ್ಗಳು ರವಾನೆಯಾಗಿವೆ ಎಂದು ಪೊಲೀಸ್ ಮೂಲಗಳಿಂದ ಗೊತ್ತಾಗಿದೆ. ಬಾಂಬ್ ಬೆದರಿಕೆಯ ಗಂಭೀರ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸಭೆಯ ಬಳಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಪೊಲೀಸರಿಂದ ಮಾಹಿತಿ ಸಂಗ್ರಹಿಸಿರುವುದಾಗಿ ಹೇಳಿದರು. ಬೆದರಿಕೆ ಪತ್ರ ಎಲ್ಲಿಂದ ಬಂದಿದೆ ಅನ್ನೋದನ್ನು ಪತ್ತೆ ಮಾಡುವಂತೆ ಮತ್ತು ಸಂದೇಶ ಕಳಿಸಿದವರನ್ನು ಆದಷ್ಟು ಬೇಗ ಬಂಧಿಸುವಂತೆ ಪೊಲೀಸರು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ