ದಕ್ಷಿಣ ಕನ್ನಡ: ಕಾರು, ಬೈಕ್​ ನಡುವೆ ಡಿಕ್ಕಿ; ಓರ್ವ ಯುವತಿ ಸಾವು; ಅಪಘಾತ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Sep 16, 2023 | 3:49 PM

ಉಡುಪಿಯಿಂದ ಮಂಗಳೂರು ಕಡೆ ಬರುವಾಗ ಈ ದುರ್ಘಟನೆ ನಡೆದಿದ್ದು, ಬೈಕ್​ನಿಂದ ರಸ್ತೆಗೆ ಬಿದ್ದ ಯುವತಿ ತಲೆಗೆ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮೊದಲೇ ಗಾಯಾಳು ಪ್ರೀತಿಕಾ ಶೆಟ್ಟಿ ಕೊನೆಯುಸಿರೆಳೆದಿದ್ದಾಳೆ. ಈ ಘಟನೆಯ ಭೀಕರ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ದಕ್ಷಿಣ ಕನ್ನಡ, ಸೆ.16: ಜಿಲ್ಲೆಯ ಮುಲ್ಕಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು, ಬೈಕ್​ ನಡುವೆ ಡಿಕ್ಕಿಯಾಗಿದ್ದು, ಬೈಕ್​ನಲ್ಲಿದ್ದ ಯುವತಿ ಸಾವನ್ನಪ್ಪಿದ್ದಾಳೆ. ಕಾಸರಗೋಡು(Kasaragod) ಜಿಲ್ಲೆಯ ಬಾಕ್ರಬೈಲು ನಿವಾಸಿ ಪ್ರೀತಿಕಾ ಶೆಟ್ಟಿ(21) ಮೃತ ರ್ದುದೈವಿ. ಬೈಕ್ ಸವಾರ ಬಂಟ್ವಾಳದ ಮನ್ವಿತ್ ರಾಜ್​ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಉಡುಪಿಯಿಂದ ಮಂಗಳೂರು ಕಡೆ ಬರುವಾಗ ಈ ದುರ್ಘಟನೆ ನಡೆದಿದ್ದು, ಬೈಕ್​ನಿಂದ ರಸ್ತೆಗೆ ಬಿದ್ದ ಯುವತಿ ತಲೆಗೆ ಗಂಭೀರ ಗಾಯವಾಗಿತ್ತು. ಆಸ್ಪತ್ರೆಗೆ ಸಾಗಿಸುವ ಮೊದಲೇ ಗಾಯಾಳು ಪ್ರೀತಿಕಾ ಶೆಟ್ಟಿ ಕೊನೆಯುಸಿರೆಳೆದಿದ್ದಾಳೆ. ಈ ಘಟನೆಯ ಭೀಕರ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಮುಲ್ಕಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More