ಕಂಟೇನರ್ ಹಾಗೂ ಲಾರಿ ನಡುವೆ ಡಿಕ್ಕಿ; ಅನಾನಸ್ ತುಂಬಿಕೊಂಡ ಲಾರಿ ಬೆಂಕಿಗಾಹುತಿ
ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾರವಾರ: ಕಂಟೇನರ್ ಹಾಗೂ ಲಾರಿ ನಡುವೆ ಡಿಕ್ಕಿ (Accident) ಹೊಡೆದ ರಭಸಕ್ಕೆ ಲಾರಿ ಹೊತ್ತಿ ಉರಿದಿರುವಂತಹ ಘಟನೆ ನಡೆದಿದೆ. ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಹೊನ್ನಾವರ ಕಡೆಯಿಂದ ಅಂಕೋಲಾ ಕಡೆ ಅನಾನಸ್ ತುಂಬಿಕೊಂಡು ಲಾರಿ ಸಾಗುತ್ತಿತ್ತು. ಮಾರ್ಗ ಮಧ್ಯೆ ಅಪಘಾತವಾಗಿ ಲಾರಿ ಪಲ್ಟಿಯಾಗಿ ಬೆಂಕಿಗಾಹುತಿಯಾಗಿದೆ. ಲಾರಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:
ಹಿಜಾಬ್ ಬಿಸಿ: ಶಿಕ್ಷಣ ಇಲಾಖೆಗೆ ತಲೆನೋವಾದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಗೈರುಹಾಜರಿ
ಶಿವಕುಮಾರ ಶ್ರೀಗಳ 115ನೇ ಜಯಂತಿ ಹಿನ್ನೆಲೆ; ಸಿದ್ಧಗಂಗಾ ಮಠಕ್ಕೆ ಇಂದು ರಾಹುಲ್, ನಾಳೆ ಅಮಿತ್ ಷಾ ಭೇಟಿ
Loading...
Unable to load recommendations.
Follow Us