ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ

Updated on: Jan 13, 2025 | 7:21 PM

ಇತ್ತೀಚೆಗೆ ಬಿಗ್ ಬಾಸ್ ಮನೆಗೆ ನಿರೂಪಕಿ ಅನುಪಮಾ ಗೌಡ ಅವರು ಬಂದಿದ್ದರು. ದೊಡ್ಮನೆ ಸದಸ್ಯರಿಂದಲೇ ಹೊಸ ಶೋಗೆ ಪ್ರೋಮೋ ಮಾಡಿಸಲಾಯಿತು. ರಜತ್, ಗೌತಮಿ, ಮಂಜು, ಮೋಕ್ಷಿತಾ ಮುಂತಾದವರು ಖಡಕ್ ಡೈಲಾಗ್ ಹೇಳುವ ಮೂಲಕ ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋದಲ್ಲಿ ಮಿಂಚಿದ್ದಾರೆ. ಅದನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋ ಮುಗಿದ ಬಂತರ ‘ಕಲರ್ಸ್​ ಕನ್ನಡ’ದಲ್ಲಿ ‘ಬಾಯ್ಸ್ Vs ಗರ್ಲ್ಸ್​’ ಕಾರ್ಯಕ್ರಮ ಪ್ರಸಾರ ಆಗಲಿದೆ. ಅದರ ಪ್ರೋಮೋ ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಗಿದೆ. ದೊಡ್ಮನೆಯೊಳಗೆ ಇರುವ ಸ್ಪರ್ಧಿಗಳಿಂದಲೇ ನಿರೂಪಕಿ ಅನುಪಮಾ ಗೌಡ ಅವರು ಈ ಪ್ರೋಮೋ ಮಾಡಿಸಿದ್ದಾರೆ. ಹೊಸ ಶೋ ಯಶಸ್ವಿ ಆಗಲಿ ಎಂದು ಸುದೀಪ್ ಅವರು ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More