AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಅಂತ ಗೊತ್ತಾಯ್ತಾ?

ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಅಂತ ಗೊತ್ತಾಯ್ತಾ?

ಮದನ್​ ಕುಮಾರ್​
|

Updated on: Sep 04, 2026 | 9:43 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋ ಆರಂಭಕ್ಕೆ ಸಕಲ ಸಿದ್ಧತೆ ನಡೆದಿದೆ. ಸೆ.6ರಂದು ಅದ್ದೂರಿಯಾಗಿ ಗ್ರ್ಯಾಂಡ್ ಪ್ರೀಮಿಯರ್ ಆಗಲಿದೆ. ಸ್ಪರ್ಧಿಗಳನ್ನು ಕಿಚ್ಚ ಸುದೀಪ್ ವೇದಿಕೆಗೆ ಕರೆದು ಪರಿಚಯ ಮಾಡಿಕೊಡಲಿದ್ದಾರೆ. ಆದರೆ ಅದಕ್ಕೂ ಮುನ್ನ ಕೆಲವು ಸ್ಪರ್ಧಿಗಳ ವಿಡಿಯೋವನ್ನು ‘ಕಲರ್ಸ್ ಕನ್ನಡ’ ಹಂಚಿಕೊಂಡಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋ ಆರಂಭಕ್ಕೆ ಸಕಲ ಸಿದ್ಧತೆ ನಡೆದಿದೆ. ಸೆಪ್ಟೆಂಬರ್ 6ರಂದು ಅದ್ದೂರಿಯಾಗಿ ಗ್ರ್ಯಾಂಡ್ ಪ್ರೀಮಿಯರ್ ಆಗಲಿದೆ. ಕಿಚ್ಚ ಸುದೀಪ್ ಅವರು ಸ್ಪರ್ಧಿಗಳನ್ನು ವೇದಿಕೆಗೆ ಕರೆದು ಪರಿಚಯ ಮಾಡಿಕೊಡಲಿದ್ದಾರೆ. ಆದರೆ ಅದಕ್ಕೂ ಮುನ್ನವೇ ಕೆಲವು ಸ್ಪರ್ಧಿಗಳ ವಿಡಿಯೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಆದರೆ ಟ್ವಿಸ್ಟ್ ಏನೆಂದರೆ, ಈ ವಿಡಿಯೋದಲ್ಲಿ ಸ್ಪರ್ಧಿಗಳ ಮುಖ ಸರಿಯಾಗಿ ಕಾಣಿಸಿಲ್ಲ. ಹಾಗಾಗಿ ಇವರು ಯಾರು ಎಂಬುದನ್ನು ವೀಕ್ಷಕರೇ ಗೆಸ್ ಮಾಡಬೇಕು. ಈ ಬಾರಿ ಸೆಲೆಬ್ರಿಟಿಗಳ ಜೊತೆಗೆ ಜನಸಾಮಾನ್ಯರು ಕೂಡ ಬಿಗ್​ ಬಾಸ್ ಮನೆಗೆ ಎಂಟ್ರಿ ನೀಡುತ್ತಿದ್ದಾರೆ. ಹಾಗಾಗಿ ವೀಕ್ಷಕರಲ್ಲಿ ಹೆಚ್ಚು ಕುತೂಹಲ ಮೂಡಿದೆ. ಸದ್ಯ ‘ಕಲರ್ಸ್ ಕನ್ನಡ’ ಹಂಚಿಕೊಂಡ ಈ ವಿಡಿಯೋಗೆ ವೀಕ್ಷಕರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More