‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋ ಆರಂಭಕ್ಕೂ ಮೊದಲೇ ತಿಳಿಯುತ್ತೆ ಸ್ಪರ್ಧಿಗಳ ಹೆಸರು

Updated on: Sep 23, 2024 | 8:10 PM

ಇಷ್ಟು ವರ್ಷಗಳ ಕಾಲ ಬಿಗ್​ ಬಾಸ್​ ಕಾರ್ಯಕ್ರಮದ ಗ್ರ್ಯಾಂಡ್​ ಓಪನಿಂಗ್​ ದಿನದಂದು ಸ್ಪರ್ಧಿಗಳು ಯಾರು ಎಂಬುದು ಗೊತ್ತಾಗುತ್ತಿತ್ತು. ಆದರೆ ಈ ಬಾರಿ ಅದಕ್ಕೂ ಮುನ್ನವೇ ಕಂಟೆಸ್ಟೆಂಟ್​ಗಳ ಹೆಸರನ್ನು ಬಹಿರಂಗ ಮಾಡಲು ‘ಕಲರ್ಸ್​ ಕನ್ನಡ’ ವಾಹಿನಿ ನಿರ್ಧರಿಸಿದೆ. ಈ ಬಗ್ಗೆ ಕಿಚ್ಚ ಸುದೀಪ್​ ಅವರ ಸಮ್ಮುಖದಲ್ಲೇ ಬಿಸ್ನೆಸ್​ ಹೆಡ್​ ಪ್ರಶಾಂತ್ ನಾಯಕ್ ಅವರು ಮಾಹಿತಿ ನೀಡಿದ್ದಾರೆ.

‘ಈ ಬಾರಿ ಸ್ವರ್ಗ ಮತ್ತು ನರಕದ ಥೀಮ್​ ಇರಲಿದೆ. ಲಾಂಚ್​ಗಿಂತಲೂ ಮೊದಲೇ ಸ್ಪರ್ಧಿಗಳ ಹೆಸರನ್ನು ಬಹಿರಂಗಪಡಿಸಲು ಪ್ಲ್ಯಾನ್​ ಮಾಡಿದ್ದೇವೆ. ಶನಿವಾರ (ಸೆ.28) ರಾಜಾ ರಾಣಿ ಶೋ ಫಿನಾಲೆಯಲ್ಲಿ ಬಿಗ್​ ಬಾಸ್​ನ ಕೆಲವು ಸ್ಪರ್ಧಿಗಳ ಹೆಸರು ರಿವೀಲ್​ ಮಾಡುತ್ತೇವೆ. ಇದು ಈ ಬಾರಿಯ ಹೊಸತನ. ಆ ಸ್ಪರ್ಧಿಗಳು ಸ್ವರ್ಗಕ್ಕೆ ಹೋಗಬೇಕೋ ಅಥವಾ ನರಕಕ್ಕೆ ಹೋಗಬೇಕೋ ಎಂಬುದನ್ನು ನಿರ್ಧರಿಸಲು ವೀಕ್ಷಕರು ಓಟ್​ ಮಾಡಬಹುದು’ ಎಂದು ವಾಹಿನಿಯ ಬಿಸ್ನೆಸ್​ ಹೆಡ್​ ಪ್ರಶಾಂತ್ ನಾಯಕ್ ತಿಳಿಸಿದ್ದಾರೆ. ಸೆ.29ರಂದು ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಗ್ರ್ಯಾಂಡ್​ ಓಪನಿಂಗ್​ ಇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More