Home minister speaks: ಎಷ್ಟೇ ಕಷ್ಟವಾದರೂ ಎಲ್ಲ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ: ಡಾ ಜಿ ಪರಮೇಶ್ವರ್, ಗೃಹ ಸಚಿವ
ಈಗಾಗಲೇ ಶಕ್ತಿ ಯೋಜನೆಯನ್ನು ಜಾರಿಮಾಡಲಾಗಿದೆ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆ ಜಾರಿಗೊಳಿಸಲು ಪ್ರಕ್ರಿಯೆ ಶುರುವಾಗಿದೆ ಎಂದು ಪರಮೇಶ್ವರ್ ಹೇಳಿದರು.
ಬೆಂಗಳೂರು: ನಗರದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಟಿವಿ9 ಕನ್ನಡ ವಾಹಿನಿ ವರದಿಗಾರನೊಂದಿಗೆ ಮಾತಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್ (Dr G Parameshwar), ಕಾಂಗ್ರೆಸ್ ಪಕ್ಷ ನೀಡಿರುವ 5 ಗ್ಯಾರಂಟಿಗಳನ್ನು (5 Guarantees) ಜಾರಿಗೆ ತರೋದು ಕೊಂಚ ತಡವಾಗಬಹುದು ಆದರೆ ಎಷ್ಟೇ ಕಷ್ಟ ಎದುರಾದರೂ ಅವುಗಳನ್ನು ಈಡೇರಿಸಲಾಗುವುದು ಎಂದು ಹೇಳಿದರು. ಬಿಜೆಪಿ ನಾಯಕರು ಸುಖಾಸುಮ್ಮನೆ ಜನರನ್ನು ಗೊಂದಲಕ್ಕೆ ದೂಡುವ ಪ್ರಯತ್ನ ಮಾಡುತ್ತಿದ್ದಾರೆ. ಈ ಗ್ಯಾರಂಟಿಗಳ ಹಿನ್ನೆಲೆಯಲ್ಲೇ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ, ಒಂದು ಪಕ್ಷ ಅವರು ಅವುಗಳನ್ನು ಜಾರಿಗೆ ತಂದುಬಿಟ್ಟರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha Polls) ಅವರಿಗೆ ವೋಟು ಯಾಚಿಸಲು ಮುಖ ಇರೋದಿಲ್ಲ ಎಂಬ ಕಾರಣಕ್ಕೆ ಹಾಗೆ ಮಾಡುತ್ತಿದ್ದಾರೆ ಎಂದು ಪರಮೇಶ್ವರ್ ಹೇಳಿದರು. ಈಗಾಗಲೇ ಶಕ್ತಿ ಯೋಜನೆಯನ್ನು ಜಾರಿಮಾಡಲಾಗಿದೆ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆ ಜಾರಿಗೊಳಿಸಲು ಪ್ರಕ್ರಿಯೆ ಶುರುವಾಗಿದೆ ಎಂದು ಪರಮೇಶ್ವರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ