ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆ ಏರಿಕೆ ಪರಿಣಾಮ ಊಟ-ತಿಂಡಿ ದರವೂ ಹೆಚ್ಚಾಗುತ್ತಾ? ಹೋಟೆಲ್ ಮಾಲೀಕರು ಏನಂತಾರೆ ನೋಡಿ

Edited By:

Updated on: Jun 01, 2026 | 10:45 AM

ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತಷ್ಟು ಏರಿಕೆಯಾಗಿ 4,000 ರೂ. ತಲುಪುವ ಆತಂಕ ಎದುರಾಗಿದ್ದು, ಹೋಟೆಲ್ ತಿಂಡಿ-ಊಟದ ದರ ಹೆಚ್ಚಳವಾಗುವ ಭೀತಿ ಎದುರಾಗಿದೆ. ಗ್ರಾಹಕರ ಮೇಲಿನ ಹೊರೆ ತಗ್ಗಿಸಲು ಬೆಂಗಳೂರಿನ ಹೋಟೆಲ್‌ಗಳು ಈಗ ಎಲೆಕ್ಟ್ರಿಕ್ ಸ್ಟೌವ್‌ಗಳ ಬಳಕೆ ಹಾಗೂ ಇತರ ಪರ್ಯಾಯ ಮಾರ್ಗಗಳ ಮೊರೆ ಹೋಗುತ್ತಿವೆ.

ಬೆಂಗಳೂರು, ಜೂನ್ 1: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಸರಣಿಯಾಗಿ ಏರಿಕೆಯಾಗುತ್ತಿರುವುದು ಹೋಟೆಲ್ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಿದೆ. ಇಂದು ಕೂಡ ಕಮರ್ಷಿಯಲ್ ಸಿಲಿಂಡರ್ ದರದಲ್ಲಿ ಬೆಂಗಳೂರಿನಲ್ಲಿ 46 ರೂ. ಹೆಚ್ಚಳವಾಗಿದ್ದು, ಮುಂಬರುವ ದಿನಗಳಲ್ಲಿ ಇದರ ಬೆಲೆ ಬರೋಬ್ಬರಿ 4 ಸಾವಿರ ರೂಪಾಯಿ ತಲುಪುವ ಸಾಧ್ಯತೆಯಿದೆ ಎಂದು ಗ್ಯಾಸ್ ಏಜೆನ್ಸಿಗಳು ಈಗಾಗಲೇ ಮುನ್ಸೂಚನೆ ನೀಡಿವೆ. ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಿಂದ ಹೋಟೆಲ್ ಮಾಲೀಕರಿಗೆ ತೊಂದರೆಯಾಗುತ್ತಿದ್ದು, ದರ ಏರಿಕೆ ಮಾಡುವುದು ಬಿಟ್ಟು ಬೇರೆ ದಾರಿಯಿಲ್ಲದ ಕಾರಣ ಈಗಾಗಲೇ ಸಾಕಷ್ಟು ಹೋಟೆಲ್‌ಗಳು ಮುಚ್ಚಲ್ಪಟ್ಟಿವೆ.

ಪ್ರತಿ ಬಾರಿ ಕಮರ್ಷಿಯಲ್ ಸಿಲಿಂಡರ್ ದರ ಏರಿಕೆಯಾದಾಗ ಆ ಹೊರೆಯನ್ನು ನೇರವಾಗಿ ಗ್ರಾಹಕರ ಮೇಲೆ ಹಾಕಲು ಸಾಧ್ಯವಿಲ್ಲ. ಹೀಗಾಗಿ ಹೋಟೆಲ್ ಉದ್ಯಮಿಗಳು ಈಗ ಪರ್ಯಾಯ ಮಾರ್ಗಗಳನ್ನು ಹುಡುಕಿಕೊಳ್ಳುತ್ತಿದ್ದಾರೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಜಂಟಿ ಕಾರ್ಯದರ್ಶಿ ಕೃಷ್ಣರಾಜ್ ಹೇಳಿದ್ದಾರೆ. ‘ದರ ಏರಿಕೆಯ ಹೊರೆ ತಪ್ಪಿಸಲು ನಾವು ಈಗಾಗಲೇ ಎಲೆಕ್ಟ್ರಿಕ್ ಸ್ಟೌವ್‌ಗಳ ಬಳಕೆಯ ಮೊರೆ ಹೋಗಿದ್ದೇವೆ. ಈ ಹಿಂದೆ ನಮಗೆ ನಿತ್ಯ 5 ಸಿಲಿಂಡರ್‌ಗಳು ಬೇಕಾಗುತ್ತಿದ್ದವು. ಆದರೆ ಎಲೆಕ್ಟ್ರಿಕ್ ಸ್ಟೌವ್ ಬಳಸುತ್ತಿರುವುದರಿಂದ ಈಗ ಕೇವಲ ಒಂದೂವರೆ ಸಿಲಿಂಡರ್ ಮಾತ್ರ ಬೇಕಾಗುತ್ತಿದೆ. ಇದರಿಂದ ಗ್ರಾಹಕರ ಮೇಲಿನ ಹೊರೆ ತಪ್ಪಿಸಬಹುದು’ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 01, 2026 10:44 AM
Follow Us
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More