ಕುಮಾರಸ್ವಾಮಿ ವಿರುದ್ಧ ಎಫ್ಐಆರ್: ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದೇನು ನೋಡಿ
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ಟಾಟಾ ನೀಡಿರುವ ದೂರಿನ ಆಧಾರದಲ್ಲಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ. ದಯಾನಂದ್ ಹೇಳಿದ್ದೇನೆಂಬುದನ್ನು ಇಲ್ಲಿ ನೋಡಿ.
ಬೆಂಗಳೂರು, ಅಕ್ಟೋಬರ್ 4: ಉದ್ಯಮಿ ವಿಜಯ್ ಟಾಟಾ ಎಂಬವರು ನೀಡಿದ್ದ ದೂರಿನ ಮೇರೆಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ನಿಷ್ಪಕ್ಷಪಾತವಾದ ತನಿಖೆ ನಡೆಸಲಾಗುವುದು ಎಂದಿದ್ದಾರೆ.
ಪೊಲೀಸ್ ಸಿಬ್ಬಂದಿಗೆ ಎಚ್ಚರಿಕೆ
ಏತನ್ಮಧ್ಯೆ ವರ್ಗಾವಣೆ ವಿಚಾರವಾಗಿ ಪೊಲೀಸ್ ಸಿಬ್ಬಂದಿಗೆ ಕಮಿಷನರ್ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಆಡುಗೋಡಿ ಸಿಎಆರ್ ಮೈದಾನದಲ್ಲಿ ನಡೆದ ಮಾಸಿಕ ಸೇವಾ ಕವಾಯತು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವರ್ಗಾವಣೆ ವಿಚಾರವಾಗಿ ಸಾಕಷ್ಟು ಸಿಬ್ಬಂದಿ ಕಚೇರಿಗೆ ಬರುತ್ತಿದ್ದಾರೆ. ಸರಿಯಾದ ಸಮಯದಲ್ಲಿ ನಾವೇ ವರ್ಗಾವಣೆ ಮಾಡುತ್ತೇವೆ. ಪ್ರತಿದಿನ ಸಿಬ್ಬಂದಿ ಬರುವುದರಿಂದ ಇದೇ ಕೆಲಸವಾಗಿಬಿಡುತ್ತದೆ. ಇದನ್ನು ಪೊಲೀಸ್ ಸಿಬ್ಬಂದಿ ಗಂಭೀರವಾಗಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ನಿಮ್ಮನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ