ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು: ಮಜ್ಜಿಗೆ, ನೀರು ವಿತರಣೆ

Edited By:

Updated on: Sep 20, 2026 | 10:36 PM

ಮೈಸೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆಯು ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಟಿ. ನರಸೀಪುರದ ವಿವಾದದ ನಡುವೆ, ಮೈಸೂರಿನ ಮುಸ್ಲಿಂ ಯುವಕರು ಮಸೀದಿಯ ಬಳಿ ಗಣಪತಿ ಭಕ್ತರಿಗೆ ಮಜ್ಜಿಗೆ ಮತ್ತು ನೀರು ವಿತರಿಸುವ ಮೂಲಕ ಸೌಹಾರ್ದತೆಯ ಸಂದೇಶ ಸಾರಿದ್ದಾರೆ. ಸೋಹೇಲ್ ಬೇಗ್ ನೇತೃತ್ವದ ಈ ಕಾರ್ಯ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ಮೈಸೂರು, ಸೆಪ್ಟೆಂಬರ್​​ 20: ಜಿಲ್ಲೆಯ ಟಿ. ನರಸೀಪುರದಲ್ಲಿ ಮಸೀದಿ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಬಗ್ಗೆ ವಿವಾದ ಉಂಟಾಗಿದ್ದರೂ ಸಾಂಸ್ಕೃತಿಕ ನಗರಿ ಮೈಸೂರು ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಮೈಸೂರಿನ ವೀರನೆಗರೆಯಲ್ಲಿ ನಡೆದ ಸಾಮೂಹಿಕ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಾಜಿ ಪಾಲಿಕೆ ಸದಸ್ಯ ಸೋಹೇಲ್ ಬೇಗ್ ನೇತೃತ್ವದಲ್ಲಿ ಮುಸ್ಲಿಂ ಯುವಕರ ತಂಡವು ಗಣೇಶ ಭಕ್ತರಿಗೆ ಮಜ್ಜಿಗೆ ಮತ್ತು ಕುಡಿಯುವ ನೀರು ವಿತರಿಸಿದೆ. ಅಶೋಕ್ ರಸ್ತೆ ಮಸೀದಿ ಬಳಿ ಈ ಕಾರ್ಯ ನಡೆದಿರುವುದು ವಿಶೇಷ. ಈ ಮೂಲಕ ಗಣಪತಿ ಉತ್ಸವವು ಜಾತಿ-ಧರ್ಮ ಭೇದವಿಲ್ಲದೆ ಸಾಮರಸ್ಯವನ್ನು ಮೂಡಿಸಬೇಕು ಎಂಬ ಆಶಯವನ್ನು ಈ ಯುವಕರು ನನಸು ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More