ಸಿಸಿಬಿ ಎದುರು ವಿಚಾರಣೆಗೆ ಹಾಜರಾಗಿ ಹೊರಬಂದ ಗೋವಿಂದ ಬಾಬು ಮಾಧ್ಯಮದವರ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಲಿಲ್ಲ

ಅರುಣ್​ ಕುಮಾರ್​ ಬೆಳ್ಳಿ

Updated on: Sep 14, 2023 | 7:17 PM

ತನಿಖೆ ನಡೆಯುತ್ತಿದೆ, ಅದು ಮುಗಿದ ಬಳಿಕ ಎಲ್ಲವನ್ನು ಹೇಳುತ್ತೇನೆ, ದಯವಿಟ್ಟು ಸಹಕರಿಸಿ ಎಂದು ಅವರು ಪತ್ರಕರ್ತರಿಗೆ ಹೇಳಿದರು. ರಾಜಕಾರಣಿಗಳ ವಿಷಯವೇನಾದರೂ ಚೈತ್ರಾ ಬಾಯಿ ಬಿಟ್ಟಿದ್ದಾರಾ? ಯಾರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಅಂತ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ.

ಬೆಂಗಳೂರು: ಚೈತ್ರಾ ಕುಂದಾಪುರಳಿಂದ (Chiatra Kundapura) ತನಗೆ ಭಾರೀ ಪ್ರಮಾಣದಲ್ಲಿ ವಂಚನೆಯಾಗಿದೆ ಎಂದು ದೂರು  ಸಲ್ಲಿಸಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿ (Govind Babu Pujari) ಇಂದು ಮಧ್ಯಾಹ್ನ ಬೆಂಗಳೂರಿನ ಸಿಸಿಬಿ ಅಧಿಕಾರಿಗಳ (CCB Sleuths) ಮುಂದೆ ವಿಚಾರಣೆಗೆ ಹಾಜರಾದರು. ವಿಚಾರಣೆಯ ಬಳಿಕ ಹೊರಬಂದ ಅವರನ್ನು ಮಾಧ್ಯಮ ಪ್ರತಿನಿಧಿಗಳು ಸುತ್ತುವರಿದಾಗ ಗಾಬರಿಗೊಳಗಾದರು. ಈ ಪ್ರಕರಣ ಮತ್ತು ಇಂದಿರಾ ಕ್ಯಾಂಟೀನ್ ನಡುವೆ ಯಾವುದೇ ಸಂಬಂಧವಿಲ್ಲ, ತನ್ನ ಬಿಸಿನೆಸ್ ಗೆ ಸಂಬಂಧಿಸಿದಂತೆ ವಂಚನೆಯಾಗಿದೆ ಎಂದು ಅವರು ಹೇಳಿದರು. ಚೈತ್ರಾ ಪರಿಚಯವಾಗಿದ್ದು ಹೇಗೆ, ವಂಚನೆಗೊಳಗಾಗಿದ್ದು ಯಾವಾಗ ಗೊತ್ತಾಯಿತು ಮೊದಲಾದ ಪ್ರಶ್ನೆಗಳಿಗೆ ಪೂಜಾರಿ ಉತ್ತರ ನೀಡಲಿಲ್ಲ. ತನಿಖೆ ನಡೆಯುತ್ತಿದೆ, ಅದು ಮುಗಿದ ಬಳಿಕ ಎಲ್ಲವನ್ನು ಹೇಳುತ್ತೇನೆ, ದಯವಿಟ್ಟು ಸಹಕರಿಸಿ ಎಂದು ಅವರು ಪತ್ರಕರ್ತರಿಗೆ ಹೇಳಿದರು. ರಾಜಕಾರಣಿಗಳ ವಿಷಯವೇನಾದರೂ ಚೈತ್ರಾ ಬಾಯಿ ಬಿಟ್ಟಿದ್ದಾರಾ? ಯಾರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಅಂತ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.