AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ಮಹಿಳೆಯರಿಗೆ ಅಗೌರವ ತೋರಿಸುತ್ತಿದ್ದಾರೆ; ದೂರುದಾರೆ ಕುಶಲಾ

ಗಿಲ್ಲಿ ಮಹಿಳೆಯರಿಗೆ ಅಗೌರವ ತೋರಿಸುತ್ತಿದ್ದಾರೆ; ದೂರುದಾರೆ ಕುಶಲಾ

 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 19, 2025 | 9:48 AM

Share

ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಗಿಲ್ಲಿ ನಟ ಅವರು ಸದ್ಯ ಸುದ್ದಿಯಲ್ಲಿ ಇರೋದು ಗೊತ್ತೇ ಇದೆ. ಅವರು ಮಹಿಳೆಯರಿಗೆ ಸಾಕಷ್ಟು ಅಗೌರವ ತೋರಿದ ಆರೋಪ ಹೊತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಮೇಲೆ ದೂರು ಕೂಡ ದಾಖಲಾಗಿದೆ. ಅಷ್ಟಕ್ಕೂ ಏನಿದು ಪ್ರಕರಣ? ಆ ಬಗ್ಗೆ ಇಲ್ಲಿ ಇದೆ ವಿವರ.

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ ಅವರು ರಿಷಾ ಗೌಡ ಬಟ್ಟೆಯನ್ನು ಎತ್ತುಕೊಂಡು ಹೋಗಿ ಬಾತ್​ರೂಂನಲ್ಲಿ ಇಟ್ಟಿದ್ದು ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ಆ ಬಳಿಕ ರಿಷಾ ಹೊಡೆದಿದ್ದು ಮತ್ತಷ್ಟು ಚರ್ಚೆಯನ್ನು ಹುಟ್ಟುಹಾಕಿತು. ಈಗ ಗಿಲ್ಲಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ಈ ಬಗ್ಗೆ ಕುಶಲಾ ಮಾತನಾಡಿದ್ದು, ‘ಗಿಲ್ಲಿ ನಟ ಮಾಡಿದ್ದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ‘ಟಾಂಟ್ ಹೊಡೆದಿದ್ದನ್ನು ಸಹಿಸಿಕೊಳ್ಳಬಹುದು. ಆದರೆ, ಅಗೌರವ ತೋರಿಸಿದ್ದನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 19, 2025 08:03 AM