ಸಿದ್ದರಾಮಯ್ಯ ವಿರುದ್ಧ ದೂರು ನೀಡಲಾಗಿದೆ, ತನಿಖೆ ನಡೆದ ಮೇಲೆ ಸತ್ಯಾಸತ್ಯತೆ ಹೊರಬೀಳಲಿದೆ: ಬಿಎಸ್ ಯಡಿಯೂರಪ್ಪ
ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಯಡಿಯೂರಪ್ಪ ವ್ಯಕ್ತಪಡಿಸಿದರು.
ಶಿವಮೊಗ್ಗ: ಬಿಜೆಪಿ ನಾಯಕ ಮತ್ತು ಬಿಬಿಎಮ್ ಪಿ ಮಾಜಿ ಕಾರ್ಪೊರೇಟರ್ ಎನ್ ಅರ್ ರಮೇಶ್ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು (BS Yediyurappa), ದೂರು ನೀಡಿದ್ದಾರೆ ತನಿಖೆ ನಡೆದ ಮೇಲೆ ಸತ್ಯಾಸತ್ಯತೆ ಹೊರಬರುತ್ತದೆ ಎಂದು ಹೇಳಿದರು. ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಯಡಿಯೂರಪ್ಪ, ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆಯೂ ತೀಕ್ಷ್ಣವಾದ ಪ್ರತಿಕ್ರಿಯೆಯೇನೂ ನೀಡಲಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ ಜೋಡೊ ಯಾತ್ರೆ (Bharath Jodo Yathra) ಜನರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಬಿಜೆಪಿ ಮತ್ತೊಮ್ಮೆ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
Latest Videos