AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಪೇಟೆಯಲ್ಲಿ ತಪ್ಪಿದ ಭಾರಿ ದುರಂತ: ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​; ಹಲವು ಬೈಕ್​​ಗಳು ಜಖಂ

ಚಿಕ್ಕಪೇಟೆಯಲ್ಲಿ ತಪ್ಪಿದ ಭಾರಿ ದುರಂತ: ಪಿ.ಎಸ್.ಲೇನ್ ರಸ್ತೆಯಲ್ಲಿ ಏಕಾಏಕಿ ಕುಸಿದ ಕಾಂಪೌಂಡ್​​; ಹಲವು ಬೈಕ್​​ಗಳು ಜಖಂ

ಕಿರಣ್​ ಸೂರ್ಯ
| Edited By: |

Updated on:Oct 26, 2026 | 6:03 PM

Share

ಬೆಂಗಳೂರಿನ ಚಿಕ್ಕಪೇಟೆಯ ಪಿ.ಎಸ್. ಲೇನ್ ರಸ್ತೆಯಲ್ಲಿ ಕಾಂಪೌಂಡ್ ಗೋಡೆಯೊಂದು ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಸುಮಾರು ನಾಲ್ಕೈದು ಬೈಕ್‌ಗಳು ಜಖಂಗೊಂಡಿವೆ. ಅದೃಷ್ಟವಶಾತ್, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗೋಡೆ ಕುಸಿತಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದ ನಂತರ ನಡೆದಿರುವ ಮತ್ತೊಂದು ಗೋಡೆ ಕುಸಿತ ಇದಾಗಿದೆ.

ಬೆಂಗಳೂರು, ಅಕ್ಟೋಬರ್​​ 26: ನಗರದಲ್ಲಿ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದ ನಂತರ ಮತ್ತೊಂದು ಗೋಡೆ ಕುಸಿತದ ಘಟನೆ ವರದಿಯಾಗಿದೆ. ಚಿಕ್ಕಪೇಟೆಯ ಪಿ.ಎಸ್. ಲೇನ್ ರಸ್ತೆಯಲ್ಲಿ ಕಾಂಪೌಂಡ್ ಗೋಡೆಯೊಂದು ಅನಿರೀಕ್ಷಿತವಾಗಿ ಕುಸಿದುಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾಂಪೌಂಡ್ ಗೋಡೆ ಕುಸಿದ ಪರಿಣಾಮ ರಸ್ತೆಯ ಪಕ್ಕದಲ್ಲಿ ಸಾಲಾಗಿ ನಿಲ್ಲಿಸಿದ್ದ ಸುಮಾರು ನಾಲ್ಕೈದು ದ್ವಿಚಕ್ರ ವಾಹನಗಳು ಹಾನಿಗೊಳಗಾಗಿವೆ. ಗೋಡೆ ಕುಸಿತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗೋಡೆಯು ಶಿಥಿಲಗೊಂಡಿತ್ತೇ ಅಥವಾ ಇನ್ಯಾವುದಾದರೂ ಕಾರಣದಿಂದ ಕುಸಿದಿದೆಯೇ ಎಂಬುದರ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 26, 2026 06:02 PM

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More