ಪಹಲ್ಗಾಮ್ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಕರ್ನಾಟಕದ ಪ್ರವಾಸಿಗರು ಮೃತಪಟ್ಟಿದ್ದಾರೆ. ಸಚಿವ ಸಂತೋಷ್ ಲಾಡ್ ಅವರನ್ನು ಕಾಶ್ಮೀರಕ್ಕೆ ಕಳುಹಿಸಲಾಗಿದೆ. ಮೃತದೇಹಗಳನ್ನು ತರಲು ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಿದೆ. ಸಿಎಂ ಭದ್ರತಾ ವೈಫಲ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಏಪಿಲ್ 23: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಬುಧವಾರ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಉಗ್ರರ ದಾಳಿಯಲ್ಲಿ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಮೃತಪಟ್ಟಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಕಾಶ್ಮೀರಕ್ಕೆ ಕಳುಹಿಸಿದ್ದೇನೆ. ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಲಾಡ್ ಅವರಿಗೆ ಸೂಚಿಸಿದ್ದೇನೆ. ಮೃತದೇಹ ತರಲು ಕೇಂದ್ರ ಸರ್ಕಾರವೇ ವಿಮಾನ ವ್ಯವಸ್ಥೆ ಮಾಡಿದೆ. ಪ್ಲ್ಯಾನ್ ಮಾಡಿಯೇ ಉಗ್ರರು ದಾಳಿ ಮಾಡಿದ್ದಾರೆ. ಇದರಲ್ಲಿ ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ವೈಫಲ್ಯವಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚರ್ಚೆ ಮಾಡುತ್ತೇನೆ. ಭದ್ರತೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಉಗ್ರರನ್ನು ಮಟ್ಟ ಹಾಕುವ ಕೆಲಸ ಮಾಡಬೇಕು ಎಂದು ಹೇಳಿದರು.

ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ

ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ

ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ

ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
