ಗಾಂಧಿಗಳಿಗೆ ಈಡಿ ಸಮನ್ಸ್: ಬೆಂಗಳೂರಲ್ಲಿ ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ

ಗಾಂಧಿಗಳಿಗೆ ಈಡಿ ಸಮನ್ಸ್: ಬೆಂಗಳೂರಲ್ಲಿ ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Jun 16, 2022 | 2:14 PM

ಬೆಂಗಳೂರಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ಬಳಿಕ ಪೊಲೀಸರು ಮತ್ತು ಪ್ರತಿಭಟನೆಕಾರರ ನಡುವೆ ತಳ್ಳಾಟ-ನೂಕಾಟ ಶುರುವಾಗಿ ಗಲಾಟೆಮಯ ವಾತಾವರಣ ನಿರ್ಮಾಣವಾಗುತ್ತದೆ.

Bengaluru:  ಇದನ್ನು ನಿರೀಕ್ಷಿಸಲಾಗಿತ್ತು. ವಿಡಿಯೋ ನೋಡಿದರೆ ನಿಮಗೆ ಅರ್ಥವಾಗುತ್ತದೆ. ಬೆಂಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರು (Congress workers) ಮತ್ತು, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿ ಜೊತೆ ಘರ್ಷಣೆ ನಡೆಯುತ್ತಿದೆ. ನಿಮಗೆ ಗೊತ್ತಿದೆ. ಕಾಂಗ್ರೆಸ್ ನಾಯಕರಾದ ಸೋನಿಯಾಗಾಧಿ (Sonia Gandhi) ಮತ್ತು ರಾಹುಲ್ ಗಾಂಧಿಗೆ (Rahul Gandhi) ಜಾರಿ ನಿರ್ದೇಶನಾಲಯ (ED) ವಿಚಾರಣೆಗೆ ಕರೆದಿರುವುದು ಕಾಂಗ್ರೆಸ್ ಕಾರ್ಯಕರ್ತರನ್ನು ರೊಚ್ಚಿಗೆಬ್ಬಿಸಿದೆ. ಹಾಗಾಗೇ ಕಾಂಗ್ರೆಸ್ ಕಾರ್ಯಕರ್ತರು ದೇಶದೆಲ್ಲೆಡೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಭದ್ರತಾ ಸಿಬ್ಬಂದಿಯೊಬ್ಬರು ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ಬಳಿಕ ಪೊಲೀಸರು ಮತ್ತು ಪ್ರತಿಭಟನೆಕಾರರ ನಡುವೆ ತಳ್ಳಾಟ-ನೂಕಾಟ ಶುರುವಾಗಿ ಗಲಾಟೆಮಯ ವಾತಾವರಣ ನಿರ್ಮಾಣವಾಗುತ್ತದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published on: Jun 16, 2022 02:13 PM