ಶಿಡ್ಲಘಟ್ಟ ಕಮಿಷನರ್ಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ: ಕೈ ಮುಖಂಡನಿಗೆ ಶಾಕ್ ಕೊಟ್ಟ ಡಿಕೆ ಶಿವಕುಮಾರ್
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ. ಈ ಘಟನೆ ಸಂಬಂಧ ಆಯುಕ್ತೆ ಕಣ್ಣೀರಿಟ್ಟಿದ್ದಾರೆ. ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದು, ವಿಪಕ್ಷಗಳು ಕ್ರಮಕ್ಕೆ ಆಗ್ರಹಿಸಿವೆ. ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರ, (ಜನವರಿ 14): ಶಿಡ್ಲಘಟ್ಟ ಪೌರಾಯುಕ್ತ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ ಆರೋಪದ ಘಟನೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಟಿವಿ9 ಜೊತೆ ಮಾತನಾಡುವಾಗ ಪೌರಾಯುಕ್ತೆ ಅಮೃತಾ ಗೌಡ ಅವರು ಕಣ್ಣೀರಿಟ್ಟಿದ್ದಾರೆ. ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಲು ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಯಾರೇ ಆಗಲಿ, ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣವನ್ನು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಅಸ್ತ್ರವಾಗಿ ಬಳಸುತ್ತಿದ್ದು, ಕಾಂಗ್ರೆಸ್ ನಾಯಕನ ವರ್ತನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದಾರೆ. ಐದು ವರ್ಷಗಳ ತಮ್ಮ ಸೇವೆಯಲ್ಲಿ ಇಂತಹ ಪರಿಸ್ಥಿತಿ ಎದುರಾಗಿರಲಿಲ್ಲ ಎಂದು ಅಮೃತಾ ಗೌಡ ನೋವು ತೋಡಿಕೊಂಡಿದ್ದಾರೆ. ಮಹಿಳಾ ಅಧಿಕಾರಿಯೊಬ್ಬರಿಗೆ ಇಂತಹ ಬೆದರಿಕೆಗಳು ಬಂದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

