ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ಕಾಂಗ್ರೆಸ್​ ಕಾರ್ಯಕರ್ತರು

Edited By: ಕಿರಣ್ ಹನುಮಂತ್​ ಮಾದಾರ್

Updated on: Feb 08, 2024 | 3:17 PM

ರಾಜ್ಯಕ್ಕೆ ತೆರಿಗೆ ಅನ್ಯಾಯ ಖಂಡಿಸಿ ಈಗಾಗಲೇ ದೆಹಲಿಯ ಜಂತರ್ ಮಂತರ್​ನಲ್ಲಿ (Jantar Mantar) ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರತಿಭಟನೆ ನಡೆಸುತ್ತಿದೆ. ಈ ಹಿನ್ನಲೆ ಇಂದು(ಫೆ.08) ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ನುಗಿದ್ದು, ನಿರ್ಮಲಾ ಸೀತಾರಾಮನ್(Nirmala Sitharaman) ನಾಮಫಲಕಕ್ಕೆ ಎನ್​ಎಸ್​ಯುಐ (NSUI)  ಕಾರ್ಯಕರ್ತರು ಮಸಿ ಬಳಿದಿದ್ದಾರೆ.

ಬೆಂಗಳೂರು, ಫೆ.08: ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ನುಗಿದ್ದು, ನಿರ್ಮಲಾ ಸೀತಾರಾಮನ್(Nirmala Sitharaman) ನಾಮಫಲಕಕ್ಕೆ ಎನ್​ಎಸ್​ಯುಐ (NSUI)  ಕಾರ್ಯಕರ್ತರು ಮಸಿ ಬಳಿದಿದ್ದಾರೆ. ರಾಜ್ಯಕ್ಕೆ ತೆರಿಗೆ ಅನ್ಯಾಯ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು  ಮಸಿ ಬಳಿದ ಹಿನ್ನೆಲೆಯಲ್ಲಿ NSUI ಕಾರ್ಯಕರ್ತರಾದ ಸೂರಜ್, ಲಕ್ಷ್ಯ ರಾಜ್, ನಿಶ್ಚಯ್ ಗೌಡ, ನರೇಶ್, ಕಾರ್ತಿಕ್ ಎಮಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Feb 08, 2024 03:14 PM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More