ಕರ್ನಾಟಕ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಬಿಜೆಪಿ ವಿರುದ್ಧ ಒಬಿಸಿ ದಾಳ
ಕರ್ನಾಟಕದ ಒಟ್ಟು 7 ವಿಧಾನಪರಿಷತ್ ಸ್ಥಾನಕ್ಕೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಜೂನ್ 18 ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ನಾಲ್ಕಕ್ಕೇ ನಾಲ್ಕು ಸ್ಥಾನಗಳಿಗೂ ಒಬಿಸಿ ನಾಯಕರಿಗೆ ಮಣೆಹಾಕಿದೆ. ಈ ಮೂಲಕ ಬಿಜೆಪಿ ವಿರುದ್ಧ ಒಬಿಸಿ ದಾಳ ಉರುಳಿಸಿದೆ.
ಬೆಂಗಳೂರು, (ಜೂನ್ 03): ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಕಾಂಗ್ರೆಸ್ ತನ್ನ ಪಾಲಿನ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಬಿ.ಕೆ.ಹರಿಪ್ರಸಾದ್, ಪಿ.ವಿ.ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ತಿಪ್ಪಣ್ಣಪ್ಪ ಕಮಕನೂರು ಹೆಸರುಗಳು ಎಐಸಿಸಿ ಪ್ರಕಟಿಸಿದೆ. ಈ ಮೂಲಕ ಬಿ.ಕೆ.ಹರಿಪ್ರಸಾದ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರೆಸಿದ್ದು, ಇನ್ನುಳಿದ ಎರಡು ಸ್ಥಾನಗಳಿಗೆ ಹೊಸ ಮುಖಕ್ಕೆ ಮಣೆ ಹಾಕಲಾಗಿದೆ. ಇನ್ನು ನಾಲ್ಕು ಸ್ಥಾನಕ್ಕೂ ಒಬಿಸಿ ಸಮುದಾಯದವರಿಗೆ ಮಣೆ ಹಾಕಿರುವುದು ಅಚ್ಚರಿಕೆ ಕಾರಣವಾಗಿದೆ.
Published on: Jun 03, 2026 07:47 PM
Follow Us
Latest Videos
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

