ನೆಲಮಂಗಲ ನಗರಸಭೆ ತನ್ನದಾಗಿಸಿಕೊಂಡ ಕಾಂಗ್ರೆಸ್, ಪಕ್ಷದ ಅಭ್ಯರ್ಥಿಗಳು ಅಧ್ಯಕ್ಷ ಮತ್ತು ಉಪಾಧ್ಯಕ್ಷನಾಗಿ ಅಯ್ಕೆ
ಮಾಜಿ ವಿಧಾನಪರಿಷತ್ ಸದಸ್ಯ ಬಿಎಮ್ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆಯಿತು ಎಂದು ಪದಾಧಿಕಾರಿ ಹೇಳುತ್ತಾರೆ. ನೆಲಮಂಗಲ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಶ್ರಮಿಸುವ ಭರವಸೆಯನ್ನು ಅವರು ವ್ಯಕ್ತಪಡಿಸಿದರು. ಗಣೇಶ್ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಅವರು ಉತ್ತರ ನೀಡುತ್ತಾರೆ.
ನೆಲಮಂಗಲ: ಪಟ್ಟಣದ ನಗರಸಭೆ ಕಾಂಗ್ರೆಸ್ ಪಾಲಾಗಿದೆ. ನೆಲಮಂಗಲ ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷನ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕ್ರಮವಾಗಿ ಕಾಂಗ್ರೆಸ್ ಪಕ್ಷದ ಎನ್ ಗಣೇಶ್ ಮತ್ತು ಅದೇ ಪಕ್ಷದ ಅನಂದ್ ಅಯ್ಕೆಯಾಗಿದ್ದಾರೆ. ಅವರ ಅಯ್ಕೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು. ನೆಲಮಂಗಲ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯೊಬ್ಬರು ಕಾಂಗ್ರೆಸ್ ಪಕ್ಷದ ಎಲ್ಲ 18 ಸದಸ್ಯರು ಗಣೇಶ್ ಮತ್ತು ಆನಂದ್ ಮತ ಚಲಾಯಿಸಿದರೆಂದು ಹೇಳುತ್ತಾರಾದರೂ ಎಲ್ಲರು ಅದರಲ್ಲೂ ವಿಶೇಷವಾಗಿ ಮಹಿಳಾ ಸದಸ್ಯರು ಕೊರಳಿಗೆ ಹೂಮಾಲೆ ಹಾಕ್ಕೊಂಡಿದ್ದ ಕಾರಣ ಅಯ್ಕೆಯಾದವರು ಯಾರೆಂದು ಮೊದಮೊದಲು ಗೊತ್ತೇ ಆಗಲ್ಲ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ನೆಲಮಂಗಲ: ಹೆದ್ದಾರಿಯಲ್ಲೇ ಕಾರು ಬೈಕ್ ನಿಲ್ಲಿಸಿ ರಂಪಾಟ, ಕಿಲೋಮೀಟರ್ಗಟ್ಟಲೆ ಟ್ರಾಫಿಕ್ ಜಾಮ್

