ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು

Edited By:

Updated on: Apr 03, 2026 | 8:01 PM

ದಾವಣಗೆರೆ ಬೈಎಲೆಕ್ಷನ್​​ ನಲ್ಲಿ ಗೆಲ್ಲಲ್ಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದ್ದು, ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವ, ಶಾಸಕರು, ವಿಧಾನಪರಿಷತ್ ಸದಸ್ಯರು ಮತಬೇಟೆಗಿಳಿದಿದ್ದಾರೆ. ಇನ್ನೊಂದೆಡೆ ವಿಪಕ್ಷ ಬಿಜೆಪಿ, ಆಡಳಿರೂಢ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ ಶಾಮನೂರ ಅವರನ್ನ ಸೋಲಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಈ ನಡುವೆ ಬಿಜೆಪಿ ಶಾಸಕ ಶ್ರೀರಾಮುಲು ಅವರು ಇಂದು (ಏಪ್ರಿಲ್ 03) ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಸಮರ್ಥನನ್ನು ಸೋಲಿಸಲು ಕಾಂಗ್ರೆಸ್​​ನಲ್ಲೇ ಷಡ್ಯಂತ್ರ ನಡೆದಿದೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.

ದಾವಣಗೆರೆ, (ಏಪ್ರಿಲ್ 03): ಶಾಮನೂರು ಶಿವಶಂಕರಪ್ಪನವರು ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Davanagere South By Election )ಎದುರಾಗಿದ್ದು, ಕಾಂಗ್ರೆಸ್ (Congress) ಹಾಗೂ ಬಿಜೆಪಿ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಅದರಲ್ಲೂ ಈ ಬೈಎಲೆಕ್ಷನ್​​ ನಲ್ಲಿ ಗೆಲ್ಲಲ್ಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದ್ದು, ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವ, ಶಾಸಕರು, ವಿಧಾನಪರಿಷತ್ ಸದಸ್ಯರು ಮತಬೇಟೆಗಿಳಿದಿದ್ದಾರೆ. ಇನ್ನೊಂದೆಡೆ ವಿಪಕ್ಷ ಬಿಜೆಪಿ, ಆಡಳಿರೂಢ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ ಶಾಮನೂರ ಅವರನ್ನ ಸೋಲಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ. ಈ ನಡುವೆ ಬಿಜೆಪಿ ಶಾಸಕ ಶ್ರೀರಾಮುಲು ಅವರು ಇಂದು (ಏಪ್ರಿಲ್ 03) ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಸಮರ್ಥನನ್ನು ಸೋಲಿಸಲು ಕಾಂಗ್ರೆಸ್​​ನಲ್ಲೇ ಷಡ್ಯಂತ್ರ ನಡೆದಿದೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More