ಪರಿಷತ್‌ ಚುನಾವಣೆಯಲ್ಲಿ ಭರ್ಜರಿ ಗೆಲುವು ಬೆನ್ನಲ್ಲೇ ಕಾಂಗ್ರೆಸ್​ ಅಭ್ಯರ್ಥಿ ತಿಪ್ಪಣ್ಣಪ್ಪ ಕಮಕನೂರು ಭಾವುಕ

Edited By:

Updated on: Jun 18, 2026 | 9:08 PM

ಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ತಿಪ್ಪಣ್ಣಪ್ಪ ಕಮಕನೂರು ಭಾವುಕರಾದರು. ಕಾಂಗ್ರೆಸ್ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರ ಕೊಡುಗೆಯನ್ನು ಸ್ಮರಿಸಿದರು. ಮುಂದಿನ ದಿನಗಳಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹಾಗೂ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲು ಶ್ರಮಿಸುವುದಾಗಿ ಪ್ರತಿಜ್ಞೆ ಮಾಡಿದರು.

ಬೆಂಗಳೂರು, ಜೂನ್​​ 18: ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐವರು ದಿಗ್ವಿಜಯ ಸಾಧಿಸಿದ್ದಾರೆ. ಈ ಪೈಕಿ ತಿಪ್ಪಣ್ಣಪ್ಪ ಕಮಕನೂರು ಕೂಡ ಒಬ್ಬರು. ಭರ್ಜರಿ ಗೆಲುವು ಸಾಧಿಸುವ ತಿಪ್ಪಣ್ಣಪ್ಪ ಕಮಕನೂರು ಮೂರನೇ ಬಾರಿಗೆ ವಿಧಾನ ಪರಿಷತ್​ಗೆ ಆಯ್ಕೆ ಆಗಿದ್ದಾರೆ. ಫಲಿತಾಂಶ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನಿರೀಕ್ಷೆಗೂ ಮೀರಿ ಮತಗಳು ಲಭಿಸಿರುವುದಕ್ಕೆ ಭಾವುಕರಾದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಿಯಾಂಕ್ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರು ಸ್ಪರ್ಧಿಸಲು ಅವಕಾಶ ನೀಡಿದ್ದಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಕಟ್ಟಕಡೆಯ ಮನುಷ್ಯರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ವಿಧಾನಪರಿಷತ್ತಿನಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ಹೇಳಿದರು. ಸಾಮಾಜಿಕ ನ್ಯಾಯ ಒದಗಿಸಲು ಬದ್ಧರಾಗಿರುವುದಾಗಿ ಹೇಳಿದ ಅವರು, 2028ರಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶ್ರಮಿಸುವುದಾಗಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More