ಬೆಳಗಾವಿ ಕಾಂಗ್ರೆಸ್ ಅಧಿವೇಶನ; ಸಿದ್ದರಾಮಯ್ಯ ಏರ್ಪಡಿಸಿರುವ ಲಂಚ್ ನಂತರ ಕಾರ್ಯಕ್ರಮ ಶುರುವಾಗಲಿದೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Jan 21, 2025 | 12:27 PM

ಬೆಳಗಾವಿ ಕಾಂಗ್ರೆಸ್ ಅಧಿವೇಶನವನ್ನು ವಿರೋಧಿಗಳು ಜಾತ್ರೆ ಅನ್ನೋದಾದರೆ ಇದು ಜಾತ್ರೆಯೇ ಸರಿ, ಸಂಕ್ರಮಣ ಬಂದಾಗ ರೈತನಿಗೆ ಜಾತ್ರೆ, ಹಾಗೆಯೇ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಕಾಂಗ್ರೆಸ್ಸಿಗರಿಗೆ ಜಾತ್ರೆ, ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಪಕ್ಷವನ್ನು ಪುನರುಜ್ಜೀವಗೊಳಿಸಲು, ಪುನಶ್ಚೇತನಗೊಳಿಸಲು, ಅದಕ್ಕೆ ಜೀವ ತುಂಬಲು ಕಾಂಗ್ರೆಸ್ ನಾಯಕರೆಲ್ಲ ಶ್ರಮಿಸುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶುರುವಾಗುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ, ಮೊದಲಿಗೆ ಸುವರ್ಣ ಸೌಧದಲ್ಲಿ ಗಾಂಧಿ ಪುತ್ಥಳಿ ಅನಾವರಣವಾಗುತ್ತದೆ, ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಏರ್ಪಡಿಸಿರುವ ಲಂಚ್ ನಲ್ಲಿ ಎಲ್ಲರೂ ಭಾಗಿಯಾಗುತ್ತಾರೆ ಎಂದು ಹೇಳಿದರು. ಊಟದ ನಂತರ ಜೈ ಬಾಪು, ಜೈ ಭೀಮ್ ಜೈ ಸಂವಿಧಾನ ಥೀಮಿನ ಮೇಲೆ ಕಾಂಗ್ರೆಸ್ ಸಮಾವೇಶ ನಡೆಯುತ್ತದೆ, ರೀತಿ-ನೀತಿ-ನಿಯಮಗಳನ್ನು ಬೋಧಿಸುವ ಸಂವಿಧಾನವನ್ನು ಎಲ್ಲರೂ ರಕ್ಷಿಸಬೇಕಿದೆ, ಕಾಂಗ್ರೆಸ್ ನೀಡಿರುವ ಕೊಡುಗೆಯನ್ನು ಇಡೀ ವಿಶ್ವವೇ ಸ್ಮರಿಸುತ್ತದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಳಗಾವಿ ಕಾಂಗ್ರೆಸ್ ಅಧಿವೇಶನ: ಸಚಿವರೊಂದಿಗೆ ನಗರಕ್ಕೆ ಆಗಮಿಸಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.