ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಂದೆ ಡಿಕೆ ಶಿವಕುಮಾರ್ ತಂಡ ಪರೇಡ್: ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಆಪ್ತರ ಡಿನ್ನರ್!

Updated on: Nov 21, 2025 | 7:55 AM

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತ ಗೊಂದಲ ತಾರಕಕ್ಕೇರಿದೆ. ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಶಾಸಕರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರೆ, ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಬಣದ ನಾಯಕರು ಡಿನ್ನರ್ ಸಭೆ ನಡೆಸಿದ್ದಾರೆ. ಈ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ನವೆಂಬರ್ ಕ್ರಾಂತಿ ಸಮೀಪಿಸಿತಾ ಎಂಬ ಅನುಮಾನ ಹುಟ್ಟುಹಾಕಿದೆ.

ಬೆಂಗಳೂರು, ನವೆಂಬರ್ 21: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಣ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳು ತೀವ್ರಗೊಂಡಿದ್ದು, ನವೆಂಬರ್ ಕ್ರಾಂತಿಯ ಕುತೂಹಲ ಹೆಚ್ಚಿಸಿದೆ. ದೆಹಲಿಯಲ್ಲಿ ಡಿಕೆ ಶಿವಕುಮಾರ್ ಆಪ್ತ ಶಾಸಕರ ತಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರೆ, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಆಪ್ತ ಸಚಿವರು ಮತ್ತು ಶಾಸಕರು ಗೃಹ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ.

ಡಿನ್ನರ್ ಮೀಟಿಂಗ್​ನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ, ಸಚಿವರಾದ ಎಚ್.ಸಿ. ಮಹದೇವಪ್ಪ, ದಿನೇಶ್ ಗುಂಡೂರಾವ್, ಮುನಿಯಪ್ಪ, ವೆಂಕಟೇಶ್, ಮಾಜಿ ಸಚಿವ ರಾಜಣ್ಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅಧಿಕಾರ ಉಳಿಸಿಕೊಳ್ಳುವ ಮತ್ತು ಅಧಿಕಾರ ಪಡೆಯುವ ರಾಜಕಾರಣದ ಬಗ್ಗೆ ರಾಜಣ್ಣ ಪರೋಕ್ಷವಾಗಿ ಮಾತನಾಡಿದ್ದಾರೆ. ಇವೆಲ್ಲ ಬೆಳವಣಿಗೆಗಳ ನಡುವೆ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ. ಇಂದು ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಬರಲಿದ್ದು, ಕುತೂಹಲ ಮೂಡಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More