ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ಖರ್ಗೆಗೆ ವಿಜಯೇಂದ್ರ ತಿರುಗೇಟು!

Edited By:

Updated on: Jul 04, 2026 | 11:14 PM

ಮುಖ್ಯಾಂಶಗಳು

  • ಕೇಂದ್ರ ಚುನಾವಣಾ ಆಯೋಗ ತನ್ನ ಕರ್ತವ್ಯ ಸರಿಯಾಗಿ ಮಾಡುತ್ತಿದೆ
  • ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ
  • ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿ.ವೈ.ವಿಜಯೇಂದ್ರ ತಿರುಗೇಟು

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಕಾಂಗ್ರೆಸ್ ಅಕ್ರಮ ನಡೆಸುತ್ತಿದೆ ಎಂದು ಆರೋಪಿಸಿ ಬಿ.ವೈ.ವಿಜಯೇಂದ್ರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ್ದಾರೆ. ಬಿಎಲ್‍ಓಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಪರವಾಗಿ ಫಾರಂ ಹಂಚುತ್ತಿರುವುದು, ಮಸೀದಿ, ಚೌಲ್ಟ್ರಿ, ಶಾಸಕರ ಕಚೇರಿಗಳಲ್ಲಿ ಕೆಲಸ ಮಾಡುತ್ತಿರುವ ಬಗ್ಗೆ ಆಯುಕ್ತರ ಗಮನಕ್ಕೆ ತಂದಿದ್ದಾರೆ. ವ್ಯವಸ್ಥೆ ಬುಡಮೇಲು ಮಾಡಲು ಯತ್ನಿಸುತ್ತಿರುವ ಕಾಂಗ್ರೆಸ್ "ಕತ್ತೆಗಳ" ಬಗ್ಗೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಜುಲೈ 04: ಕೇಂದ್ರ ಚುನಾವಣಾ ಆಯೋಗ ತನ್ನ ಕರ್ತವ್ಯ ಸರಿಯಾಗಿ ಮಾಡುತ್ತಿದೆ. ಆದರೆ ರಾಜ್ಯದಲ್ಲಿರುವ ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ. ಆ ಮೂಲಕ ಚುನಾವಣಾ ಆಯೋಗ ಕತ್ತೆ ಕಾಯುತ್ತಿದೆಯಾ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಅತಂತ್ರ ಮಾಡುತ್ತಿವೆ. ಕೇಂದ್ರ ಚುನಾವಣಾ ಆಯೋಗ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us