ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲು ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಮಹತ್ವದ ಸಭೆ!
ಕಾಂಗ್ರೆಸ್ ಮೂಲಗಳ ಪ್ರಕಾರ 100ಕ್ಕೂ ಹೆಚ್ಚು ಸ್ಥಾನಗಳಿಗೆ ಒಂದೊಂದೇ ಹೆಸರನ್ನು ಹೈಕಮಾಂಡ್ ಮುಂದೆ ಇಡಲಾಗಿದೆ. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಮತ್ತು ರಾಜ್ಯದ ಹಲವು ನಾಯಕರು ಭಾಗವಹಿಸಿದ್ದರು.
ನವದೆಹಲಿ: ರಾಜ್ಯದಲ್ಲಿ ನಡೆಯಲಿರುವ ವಿಧಾನಸಬಾ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ (AICC office) ಪಕ್ಷದ ಚುನಾವಣಾ ಸಮಿತಿಯ ಮಹತ್ವದ ಸಭೆಯೊಂದು ನಡೆಯುತ್ತಿದೆ. ಎಲ್ಲ 224 ವಿಧಾನಸಭಾ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಲಾಗುವುದು ಅಂತ ಹೇಳಲಾಗುತ್ತಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ 100ಕ್ಕೂ ಹೆಚ್ಚು ಸ್ಥಾನಗಳಿಗೆ ಒಂದೊಂದೇ ಹೆಸರನ್ನು ಹೈಕಮಾಂಡ್ ಮುಂದೆ ಇಡಲಾಗಿದೆ. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸಂಸದ ರಾಹುಲ್ ಗಾಂಧಿ (Rahul Gandhi), ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal), ಕರ್ನಾಟಕದ ಎಐಸಿಸಿ ಉಸ್ತುವಾರಿ ರಂದೀಪ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಡಬ್ಲ್ಯೂಸಿ ಸದಸ್ಯ ಸಿದ್ದರಾಮಯ್ಯ, ಜಿ ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಹಿರಿಯ ನಾಯಕರಾದ ಬಿಕೆ ಹರಿಪ್ರಸಾದ್, ಎಮ್ ಬಿ ಪಾಟೀಲ್ ಮತ್ತ್ತು ಇನ್ನಿತರ ನಾಯಕರು ಭಾಗವಹಿಸಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ