ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಮಾಜಿ ಸಂಸದ ಡಿಕೆ ಸುರೇಶ್
ಶಾಸಕ ಆರ್ವಿ ದೇಶಪಾಂಡೆ, ಸಚಿವ ಜಮೀರ್ ಅಹ್ಮದ್ ಸೇರಿಂದತೆ 5-6 ನಾಯಕರು ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ಮಾತನಾಡಿ, ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಹೇಳಿದರು.
ಕರ್ನಾಟಕ ಕಾಂಗ್ರೆಸ್ನಲ್ಲಿ (Congress) ಮುಖ್ಯಮಂತ್ರಿಯಾಗುವ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಿದೆ. ಇತ್ತೀಚಿಗೆ ಶಾಸಕ ಆರ್ವಿ ದೇಶಪಾಂಡೆ (RV Deshpande), ಸಚಿವ ಜಮೀರ್ ಅಹ್ಮದ್ (Zameer Ahmed) ಸೇರಿಂದತೆ 5-6 ನಾಯಕರು ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ (DK Suresh) ಮಾತನಾಡಿ, ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ ಎಂದು ಹೇಳಿದರು. ಮುಂದೆ ನಾನು ಮುಖ್ಯಮಂತ್ರಿ ಆಗುತ್ತೇನೆ ಅಂತ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ. ಇದು ರಾಜಕೀಯ ತಂತ್ರ. ತಮ್ಮ ಪಕ್ಷ ಉಳಿಸಿಕೊಳ್ಳಲು ಉಳಿಸಿಕೊಳ್ಳಲು ಹಾಗೆ ಹೇಳುತ್ತಾರೆ ಎಂದರು.
ರಾಜ್ಯದಲ್ಲಿ ಬಲಿಷ್ಠ ಸರ್ಕಾರವಿದೆ, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಸಮರ್ಥ ನಾಯಕತ್ವವಿದೆ. ಕಾಂಗ್ರೆಸ್ ಸರ್ಕಾರದ ಇರುತ್ತದೆ, ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ ಅಂತ ತಿಳಿಸಿದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಪಾತ್ರವಿಲ್ಲ. ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲು ಯಾವುದೇ ದಾಖಲೆ ಇಲ್ಲ. ಎಷ್ಟು ಜನ ತನಿಖೆ ಎದುರಿಸಿಲ್ಲ, ಅಮಿತ್ ಶಾ, ಪ್ರಧಾನಮಂತ್ರಿ ತನಿಖೆ ಎದುರಿಸುತ್ತಿಲ್ಲವಾ? ಎಂದು ಪ್ರಶ್ನಿಸಿದರು.
ಬಿಜೆಪಿ ಪಾದಯಾತ್ರೆ ಮಾಡಿದ ವಿಚಾರವಾಗಿ ಮಾತನಾಡಿದ ಅವರು, ಪಾದಯಾತ್ರೆ ಮಾಡಲಿ ಒಳ್ಳೆಯದು. ದೇವರಾಜ್ ಅರಸು ಟ್ರಕ್ ಟರ್ಮಿನಲ್ ಹಗರಣ ಸೇರಿಸಿಕೊಂಡು ಪಾದಯಾತ್ರೆ ಮಾಡಬೇಕು. ಆಗ ದೇಶದ ಜನರಿಗೆ ಗೊತ್ತಾಗುತ್ತದೆ. ಕೇಂದ್ರ ಸಚಿವರು ಎಸ್ಟಿ, ಎಸ್ಸಿ ಜಮೀನನ್ನು ಬರೆಸಿಕೊಂಡಿದ್ದ ವಿಚಾರವಾಗಿ ಪಾದಯಾತ್ರೆ ಮಾಡಲಿ ಎಂದು ಟಾಂಗ್ ಕೊಟ್ಟರು.
ಇದನ್ನೂ ಓದಿ: ಮುಖ್ಯಮಂತ್ರಿ ತವರು ಮೈಸೂರಲ್ಲೆ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಆರ್ವಿ ದೇಶಪಾಂಡೆ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:49 pm, Wed, 4 September 24