Karnataka Assembly polls: ಬಹುಮತ ಸಿಕ್ಕರೆ ತಾನೆ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗುವ ಕನಸು ಕಾಣೋದು? ಹೆಚ್ ಡಿ ಕುಮಾರಸ್ವಾಮಿ
ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳೂ ತಲಾ 60-70 ಸ್ಥಾನಗಳಿಗಿಂತ ಹೆಚ್ಚು ಗೆಲ್ಲಲ್ಲ, ಜೆಡಿಎಸ್ ಪಕ್ಷವೇ 120-130 ಸೀಟು ಗೆದ್ದು ಅಧಿಕಾರಕ್ಕೆ ಬರೋದು ಎಂದು ಕುಮಾರಸ್ವಾಮಿ ಹೇಳಿದರು.
ಬೆಂಗಳೂರು: ಮಂಗಳವಾರ ಬೆಳಗ್ಗೆ ನಗರದ ಮೋಡ ಮುಸುಕಿದ ವಾತಾವರಣದಲ್ಲಿ ತಿಳಿನೀಲಿ ವರ್ಣದ ಟೀ-ಶರ್ಟ್ ಧರಿಸಿ ಕಾರಲ್ಲಿ ಹೊರಟಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿಯವರಿಗೆ (HD Kumaraswamy) ಮಾಧ್ಯಮ ಪ್ರತಿನಿಧಿಗಳು ಅಡ್ಡಗಟ್ಟಿ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿಯಾಗುವುದಾಗಿ ಹೇಳುತ್ತಿರುವ ಬಗ್ಗೆ ಕೇಳಿದರು. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳ (aspirants) ದೊಡ್ಡ ಪಟ್ಟಿಯೇ ಇದೆ. ಅಷ್ಟಕ್ಕೂ ನಂಬರ್ ಗಳಿದ್ದರೆ ತಾನೆ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಯಾಗುವ ಕನಸು ಕಾಣೋದು ಅಂತ ಕುಮಾರಸ್ವಾಮಿ ವ್ಯಂಗ್ಯವಾಡಿದರು. ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳೂ ತಲಾ 60-70 ಸ್ಥಾನಗಳಿಗಿಂತ ಹೆಚ್ಚು ಗೆಲ್ಲಲ್ಲ, ಜೆಡಿಎಸ್ ಪಕ್ಷವೇ 120-130 ಸೀಟು ಗೆದ್ದು ಅಧಿಕಾರಕ್ಕೆ ಬರೋದು ಎಂದು ಕುಮಾರಸ್ವಾಮಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ