ಶಿವಕುಮಾರ್ ಸಂಘಟನಾ ಚತುರ, ಸಿದ್ದರಾಮಯ್ಯ ಮಾಸ್ ಲೀಡರ್; ಇವರಲ್ಲದೆ ಬೇರೆ ನಾಯಕರೂ ನಮ್ಮಲ್ಲಿದ್ದಾರೆ: ಎಂಬಿ ಪಾಟೀಲ್
ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಎಲ್ಲರ ಪಾಲಿದೆ, ಪರಮೇಶ್ವರ್, ಸತೀಶ್ ಜಾರಕಿಹೊಳಿ ಮತ್ತು ತಾನು ಶಕ್ತ್ಯಾನುಸಾರ ಕೆಲಸ ಮಾಡಿದ್ದೇವೆ, ಕಾಂಗ್ರೆಸ್ ಕಾರ್ಯಕರ್ತರು ಶ್ರಮಪಡದಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಸಾಧ್ಯವಿರುತ್ತಿರಲಿಲ್ಲ, ಅದಕ್ಕೂ ಮಿಗಿಲಾಗಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಟ್ಟು ಅಧಿಕಾರಕ್ಕೆ ತಂದಿದ್ದಾರೆ, ಕಾಂಗ್ರೆಸ್ ಗೆಲುವಿಗೆ ಎಲ್ಲರ ಕಾಂಟ್ರಿಬ್ಯೂಷನ್ ಇದೆ ಎಂದು ಪಾಟೀಲ್ ಹೇಳಿದರು.
ಬೆಂಗಳೂರು, ಫೆ. 27: ನಗರಲ್ಲಿಂದು ಮಾಧ್ಯಮ ಗೋಷ್ಠಿ ನಡೆಸಿ ಮಾತಾಡಿದ ಸಚಿವ ಎಂಬಿ ಪಾಟೀಲ್, ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ತನ್ನದೇ ನಾಯಕತ್ವ ಎಂದು ಡಿಕೆ ಶಿವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಆದರೆ, ಮಾಧ್ಯಮದವರು ಅದೇ ವಿಷಯಯಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದಾಗ, ಕಾಂಗ್ರೆಸ್ ಪಕ್ಷ ಯಾವತ್ತಿಗೂ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಹೊಂದಿದೆ, ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ತಮ್ಮ ನಾಯಕರು, ಶಿವಕುಮಾರ್ ಸಂಘಟನಾ ಚತುರರಾದರೆ ಸಿದ್ದರಾಮಯ್ಯ ಮಾಸ್ ಲೀಡರ್ ಎಂದು ಪಾಟೀಲ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಎಐಸಿಸಿ ಆಕ್ಷೇಪಣೆಗಳಿಗೆ, ‘ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂವಾಗೇ ಸಾಯುತ್ತೇನೆ’ ಎಂದ ಡಿಕೆ ಶಿವಕುಮಾರ್
Latest Videos

ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ

ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್ನಲ್ಲಿ ಸಂಭ್ರಮಾಚರಣೆ

ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು

ಲೋಡ್ ಶೆಡ್ಡಿಂಗ್: ವಿದ್ಯುತ್ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
