AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿ ಫಾರಂ ಬೇಕಾದಾಗ ಮಾತ್ರ ಪಕ್ಷದ ಸಿಪಾಯಿ ಅಂದರೆ ನಡೆಯಲ್ಲ, ಶಿಸ್ತು ಕಾಯ್ದುಕೊಳ್ಳಬೇಕು: ಪ್ರಿಯಾಂಕ್ ಖರ್ಗೆ

ಬಿ ಫಾರಂ ಬೇಕಾದಾಗ ಮಾತ್ರ ಪಕ್ಷದ ಸಿಪಾಯಿ ಅಂದರೆ ನಡೆಯಲ್ಲ, ಶಿಸ್ತು ಕಾಯ್ದುಕೊಳ್ಳಬೇಕು: ಪ್ರಿಯಾಂಕ್ ಖರ್ಗೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 03, 2025 | 4:37 PM

Share

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕನ್ನಡದವರೇ ಆಗಿದ್ದಾರೆ, ಅವರು ಯಾವಾಗಲೂ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ-ಎಲ್ಲರೊಂದಿಗೂ ಸಂಪರ್ಕದಲ್ಲಿರುತ್ತಾರೆ. ಪಕ್ಷದ ಎಲ್ಲ ಮುಖಂಡರು ಶಿಸ್ತಿನ ಸಿಪಾಯಿಗಳು, ಯಾರೇ ಆಗಲಿ ಹೈಕಮಾಂಡನ್ನು ಪಕ್ಕಕ್ಕಿಟ್ಟು ಮಾತಾಡಲಾರರು, ಮಾಧ್ಯಮಗಳ ಮುಂದಷ್ಟೇ ಹೇಳಿಕೆ ನೀಡುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಬೆಂಗಳೂರು, ಮಾರ್ಚ್ 3: ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ, ಯಾರಿಗಾದರೂ ಸಮಸ್ಯೆಗಳಿದ್ದರೆ ಅವರು ನೇರವಾಗಿ ದೆಹಲಿಗೆ ಹೋಗಿ ಹೈಕಮಾಂಡ್ ಜೊತೆ ಮಾತಾಡಲಿ, ಹೈಕಮಾಂಡ್ ಎಲ್ಲರಿಗೂ ಜವಾಬ್ದಾರಿಗಳನ್ನು ನೀಡಿದೆ, ಸಿದ್ದರಾಮಯ್ಯನವರು (Siddaramaiah) ಸಿಎಂ ಆಗಿದ್ದಾರೆ ಮತ್ತು ಡಿಕೆ ಶಿವಕುಮಾರ್ ಡಿಸಿಎಂ; ಸದ್ಯಕ್ಕೆ ಕುರ್ಚಿಗಳು ಖಾಲಿ ಇಲ್ಲ, ಬಿ ಫಾರ್ಮ್ ಪಡೆದುಕೊಳ್ಳುವ ಉದ್ದೇಶಕ್ಕಾಗಿ ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದರಲ್ಲಿ ಯಾವುದೇ ಅರ್ಥವಿರುವುದಿಲ್ಲ, ಹೈಕಮಾಂಡ್ ನೀಡಿರುವ ಜವಾಬ್ದಾರಿಗಳನ್ನು ಎಲ್ಲರೂ ನಿಭಾಯಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ನನ್ನ ಹೆಸರೇ ಚಲವಾದಿ, ಪ್ರಿಯಾಂಕ್ ಖರ್ಗೆ ನನ್ನ ತಂಟೆಗೆ ಬಂದರೆ ಇನ್ನು ಸಮ್ಮನಿರಲ್ಲ: ಚಲವಾದಿ ನಾರಾಯಣಸ್ವಾಮಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.