Karnataka Assembly Polls; ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಬೋವಿ ಸಮಾಜಕ್ಕೆ ಅನ್ಯಾಯವಾಗಿದೆ: ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 07, 2023 | 2:45 PM

ಮೂರನೇ ಪಟ್ಟಿಯಲ್ಲಾದರೂ ಸಮಾಜದ ನಾಯಕರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಲು ಬಂದಿರುವ ಸ್ವಾಮೀಜಿ, ಸಿದ್ದರಾಮಯ್ಯರನ್ನು ಸಾಮಾಜಿಕ ನ್ಯಾಯದ ಹರಿಕಾರ ಅಂತ ಕೊಂಡಾಡುತ್ತಾರೆ.

ಬೆಂಗಳೂರು: ಚುನಾವಣೆ ಯಾವುದೇ ಆಗಿರಲಿ, ಟಿಕೆಟ್ ಹಂಚುವ ಕೆಲಸ ಬಹಳ ತ್ರಾಸದಾಯಕ ಮತ್ತು ಜಟಿಲ. ಈಗೆಲ್ಲ ಜಾತಿ-ಧರ್ಮ-ಸಮುದಾಯಗಳ ಆಧಾರದಲ್ಲಿ ಪಕ್ಷದ ನಾಯಕರು ಟಿಕೆಟ್ ಹಂಚಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಯಾವ ಸಮುದಾಯವನ್ನೂ (community) ಕಡೆಗಣಿಸುವಂತಿಲ್ಲ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯರನ್ನು (Siddaramaiah) ಕಾಣಲು ಬಂದಿರುವ ಇವರು ಬೋವಿ ಸಮಾಜದ ಶ್ರೀಗಳಾಗಿರುವ ಸಿದ್ದರಾಮೇಶ್ವರ ಸ್ವಾಮೀಜಿಯವರು (Siddarameshwara Swamiji). ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದರೂ ತಮ್ಮ ಸಮಾಜಕ್ಕೆ ಸೂಕ್ತವಾದ ಪ್ರಾತಿನಿಧ್ಯ ಸಿಕ್ಕಿಲ್ಲ. ಮೂರನೇ ಪಟ್ಟಿಯಲ್ಲಾದರೂ ಸಮಾಜದ ನಾಯಕರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಲು ಬಂದಿರುವ ಸ್ವಾಮೀಜಿ, ಸಿದ್ದರಾಮಯ್ಯರನ್ನು ಸಾಮಾಜಿಕ ನ್ಯಾಯದ ಹರಿಕಾರ ಅಂತ ಕೊಂಡಾಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.