ಪ್ರಜ್ವಲ್ ರೇವಣ್ಣ ಪ್ರಕರಣ ನಮಗೆ ಸಂಬಂಧಿಸದ ವಿಚಾರ, ಬಿಜೆಪಿ ತನ್ನ ನಿಲುವು ಪ್ರಕಟಿಸಬೇಕು: ಡಿಕೆ ಶಿವಕುಮಾರ್
ಆದರೆ ಲೈಂಗಿಕ ಶೋಷಣೆ ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿರುವ ಅರೋಪ ಹೊತ್ತು ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಬಗ್ಗೆ ರಾಜ್ಯದೆಲ್ಲೆಡೆ ಮಹಿಳಾ ಸಂಘನೆಗಳಿಂದ ಉಗ್ರ ಪ್ರತಿಭಟನೆಗಳು ನಡೆಯುತ್ತಿವೆ, ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಬೇಕು ಮತ್ತು ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.
ಬಳ್ಳಾರಿ: ಬಳ್ಳಾರಿಯಲ್ಲಿ ಇಂದು ಚುನಾವಣಾ ಪ್ರಚಾರ ಸಭೆ ನಡೆಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಸುತ್ತುವರಿದ ಮಾಧ್ಯಮ ಪ್ರತಿನಿಧಿಗಳು ಪ್ರಜ್ವಲ್ ರೇವಣ್ಣ (Prajwal Revanna) ಬಗ್ಗೆ ಪ್ರಶ್ನೆ ಕೇಳಿದಾಗ ಆ ಪ್ರಕರಣ ಮತ್ತು ಕಾಂಗ್ರೆಸ್ (Congress party) ನಡುವೆ ಯಾವುದೇ ಸಂಬಂಧವಿಲ್ಲ ಎನ್ನವಂತೆ ಮಾತಾಡಿದರು. ಇದೇನಿದ್ದರೂ ಅವರ ಕುಟುಂಬಕ್ಕೆ ಬಿಟ್ಟ ವಿಚಾರ, ತಮ್ಮ ಪಕ್ಷಕ್ಕೂ ಮತ್ತು ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ, ಆದರೆ ಲೋಕಸಭಾ ಚುನಾವಣೆಗಾಗಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯವರನ್ನು ಇದರ ಬಗ್ಗೆ ಕೇಳಬೇಕು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ಮತ್ತು ಎನ್ ಡಿಎ ನಿಲುವೇನು ಅಂತ ಅವರನ್ನು ಕೇಳಬೇಕು ಎಂದು ಶಿವಕುಮಾಅರ್ ಹೇಳಿದರು. ಆದರೆ ಲೈಂಗಿಕ ಶೋಷಣೆ ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿರುವ ಅರೋಪ ಹೊತ್ತು ವಿದೇಶಕ್ಕೆ ಹಾರಿರುವ ಪ್ರಜ್ವಲ್ ರೇವಣ್ಣ ಬಗ್ಗೆ ರಾಜ್ಯದೆಲ್ಲೆಡೆ ಮಹಿಳಾ ಸಂಘನೆಗಳಿಂದ ಉಗ್ರ ಪ್ರತಿಭಟನೆಗಳು ನಡೆಯುತ್ತಿವೆ, ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಬೇಕು ಮತ್ತು ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ಓದಿ: ದೇವೇಗೌಡ ಕುಟುಂಬದ ಜೊತೆ ವೈರತ್ವ ಇದ್ದಿದ್ರೆ ಕುಮಾರಸ್ವಾಮಿಯನ್ನು ಕರೆದೊಯ್ದು ಸಿಎಂ ಮಾಡ್ತಿರಲಿಲ್ಲ: ಡಿಕೆ ಶಿವಕುಮಾರ್