ನಮ್ಮಲ್ಲಿ ನಾಲ್ಕೈದು ಬಾರಿ ಶಾಸಕರಾದವರಿದ್ದಾರೆ, ಅವರೆಲ್ಲ ಮಂತ್ರಿಗಳಾಗಲು ಅರ್ಹರು: ಸಂತೋಷ್ ಲಾಡ್, ಸಚಿವ
ಕ್ಯಾಬಿನೆಟ್ ಪುನಾರಚನೆ ಬಗ್ಗೆ ತಮ್ಮ ಸ್ಪಷ್ಟ ನಿಲುವು ಪ್ರಕಟಿಸಿದ ಸಂತೋಷ್ ಲಾಡ್ ಕಾಂಗ್ರೆಸ್ ಪಕ್ಷದ ಹಲವಾರು ಶಾಸಕರಿಗೆ ಮಂತ್ರಿಯಾಗುವ ಅರ್ಹತೆ ಇದೆ, ಕೆಲವರು ಐದೈದು ಬಾರಿ ಶಾಸಕರಾಗಿದ್ದಾರೆ, ಹೈಕಮಾಂಡ್ ಸಚಿವ ಸಂಪುಟವನ್ನು ಪುನಾರಚನೆ ಮಾಡಬೇಕೆಂಬ ತೀರ್ಮಾನ ತೆಗೆದುಕೊಂಡಾಗ ಅವರಿಗೆ ಅವಕಾಶ ಸಿಗುತ್ತದೆ ಎಂದು ಹೇಳಿದರು.
ಚಿಕ್ಕೋಡಿ: ನಿನ್ನೆ ಸಚಿವ ಕೆಎನ್ ರಾಜಣ್ಣ ಕೆಪಿಸಿಸಿ ಅಧ್ಯಕ್ಷರಿಗೆ ಸವಾಲು ಹಾಕಿದ್ದು ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ಸಾಯಂಕಾಲ ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿಷಯವನ್ನು ಡೌನ್ ಪ್ಲೇ ಮಾಡುವ ಪ್ರಯತ್ನ ಮಾಡಿದರು. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸುವ ಹೇಳುವ ಅವಕಾಶವಿರುತ್ತದೆ, ಆದರೆ ಎಲ್ಲ ವಿಚಾರಗಳಿಗೂ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿರುತ್ತದೆ ಅಂತ ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಎಐಸಿಸಿ ಹೆಸರು ದುರ್ಬಳಕೆ ಮಾಡುವುದು ಬೇಡ: ಡಿಸಿಎಂ ಡಿಕೆ ಶಿವಕುಮಾರ್ಗೆ ಸಚಿವ ಕೆಎನ್ ರಾಜಣ್ಣ ಖಡಕ್ ತಿರುಗೇಟು
Latest Videos