AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar; ಬಿಜೆಪಿ ಸರ್ಕಾರವನ್ನು ಭ್ರಷ್ಟ ಎಂದಿದ್ದ ಕಾಂಗ್ರೆಸ್ ಭ್ರಷ್ಟಾಚಾರದ ಪಿತಾಮಹ: ಎಸ್ ಮುನಿಸ್ವಾಮಿ, ಸಂಸದ

Kolar; ಬಿಜೆಪಿ ಸರ್ಕಾರವನ್ನು ಭ್ರಷ್ಟ ಎಂದಿದ್ದ ಕಾಂಗ್ರೆಸ್ ಭ್ರಷ್ಟಾಚಾರದ ಪಿತಾಮಹ: ಎಸ್ ಮುನಿಸ್ವಾಮಿ, ಸಂಸದ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 29, 2023 | 5:10 PM

Share

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿದಂತೆ ಕಂಟ್ರ್ಯಾಕ್ಟರ್ ಗಳೆಲ್ಲ 60 ಪರ್ಸೆಂಟ್ ಕಮೀಶನ್ ಕೇಳಲಾಗುತ್ತಿದೆ ಅಂತ ಮಾತಾಡಿಕೊಳ್ಳುತ್ತಿದ್ದುದನ್ನು ಕೇಳಿಸಿಕೊಂಡಿದ್ದಾಗಿ ಸಂಸದ ಹೇಳಿದರು.

ಕೋಲಾರ: ಕೋಲಾರದ ಸಂಸದ ಎಸ್ ಮುನಿಸ್ವಾಮಿ (S Muniswamy) ಇಂದು ನಗರದಲ್ಲಿ ಪತ್ರಿಕಾ ಗೋಷ್ಟಿ ನಡೆಸುವಾಗ ರಾಜ್ಯದ ಕಾಂಗ್ರೆಸ್ ಸರ್ಕಾರ ಮೇಲೆ ಹಲವಾರು ಅರೋಪಗಳನ್ನು ಮಾಡಿದರು. ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳ ಹೆಸರಲ್ಲಿ ಜನರನ್ನು ಯಾಮಾರಿಸಿದ್ದು ಬಯಲಾಗಿದೆ ಮುಂದಿನ ಚುನಾವಣೆಯಲ್ಲಿ ಜನ ಚೆನ್ನಾಗಿ ಪಾಠ ಕಲಿಸಲಿದ್ದಾರೆ ಎಂದು ಹೇಳಿದ ಸಂಸದ ಬಿಜೆಪಿ ಸರ್ಕಾರ ವಿರುದ್ಧ 40 ಪರ್ಸೆಂಟ್ ಕಮೀಶನ್ ಸರ್ಕಾರ ಎಂದು ಆರೋಪಿಸಿದ್ದ ಕಾಂಗ್ರೆಸ್ ಖುದ್ದು ಭ್ರಷ್ಟಾಚಾರದ ಪಿತಾಮಹವಾಗಿದೆ (hub of corruption) ಎಂದರು. ಕರ್ನಾಟಕದ ಎಐಸಿಸಿ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲ (Randeep Singh Surjewala) ಅವರನ್ನು ಅಧಿಕಾರಿಗಳ ಸಭೆಗೆ ಕರೆಸಿ ಕಮೀಶನ್ ನಿಗದಿ ಮಾಡಲಾಗಿದೆ, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕವನ್ನು ಎಟಿಎಮ್ ಮಾಡಿಕೊಳ್ಳಲಿದೆ ಎಂದು ಮುನಿಸ್ವಾಮಿ ಹೇಳಿದರು. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿದಂತೆ ಕಂಟ್ರ್ಯಾಕ್ಟರ್ ಗಳೆಲ್ಲ 60 ಪರ್ಸೆಂಟ್ ಕಮೀಶನ್ ಕೇಳಲಾಗುತ್ತಿದೆ ಅಂತ ಮಾತಾಡಿಕೊಳ್ಳುತ್ತಿದ್ದುದನ್ನು ಕೇಳಿಸಿಕೊಂಡಿದ್ದಾಗಿ ಸಂಸದ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ