ಕಾಂಗ್ರೆಸ್ ಹೈಕಮಾಂಡ್‌ನಿಂದ ಬೆಂಗಳೂರಿನಲ್ಲಿ ಮಹತ್ವದ ಸಭೆ: ವೇಣುಗೋಪಾಲ್​​, ಸುರ್ಜೇವಾಲ ಭಾಗಿ

Edited By:

Updated on: Sep 15, 2026 | 11:36 AM

ಕಾಂಗ್ರೆಸ್ ಹೈಕಮಾಂಡ್ ನಾಯಕರುಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಬೆಂಗಳೂರಿಗೆ ಆಗಮಿಸಿದ್ದಾರೆ. ಪಕ್ಷದ ಆಂತರಿಕ ಅಸಮಾಧಾನ, ಸಂಪುಟದಲ್ಲಿನ ಖಾಲಿ ಸ್ಥಾನಗಳ ಭರ್ತಿ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳ ನೇಮಕ ಮತ್ತು 2028ರ ಚುನಾವಣಾ ಸಿದ್ಧತೆಗಳ ಕುರಿತು ಸಿಎಂ, ಸಿದ್ದರಾಮಯ್ಯ ಹಾಗೂ ಹರಿಪ್ರಸಾದ್ ಅವರೊಂದಿಗೆ ಮಹತ್ವದ ಸಭೆಗಳನ್ನು ನಡೆಸಲಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 15: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್​​ ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್​​ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದು, ನಾಳೆ ಎರಡು ಮಹತ್ವದ ಸಭೆ ನಡೆಸಲಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಜೊತೆಗೆ ಮಹತ್ವದ ಮೀಟಿಂಗ್​​ ನಡೆಸಲಿದ್ದಾರೆ. ಬೆಳಗ್ಗೆ ನೂತನವಾಗಿ ಆಯ್ಕೆಯಾದ ಡಿಸಿಸಿ ಅಧ್ಯಕ್ಷರ ಜೊತೆಗೆ ಸಭೆ ನಡೆಸಲಿದ್ದು, ಬಳಿಕ ಮಧ್ಯಾಹ್ನ ಮೂವರು ನಾಯಕರೊಂದಿಗೆ ಮಹತ್ವದ ವಿಷಯಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಯಾವ ಶಾಸಕರಿಗೆ ಅವಕಾಶ ನೀಡಬೇಕು ಎಂಬ ಬಗ್ಗೆ ಸೇರಿ ಡಿಕೆಶಿ ಕ್ಯಾಬಿನೆಟ್​​ನಲ್ಲಿ ಖಾಲಿ ಇರುವ 2 ಸ್ಥಾನ ಭರ್ತಿ ಮಾಡುವ ಸಂಬಂಧ ಚರ್ಚೆ ನಡೆಯಲಿದೆ. 2028ರ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಲು ಸೂಚನೆ ಜೊತೆಗೆ ಸರ್ಕಾರ ಮತ್ತು ಪಕ್ಷ ಎರಡೂ ಸಮನ್ವಯತೆಯಿಂದ ಕೆಲಸ ಮಾಡಲು ಸಭೆಯಲ್ಲಿ ಸ್ಟ್ರಾಟಜಿ ರೂಪಿಸಲಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More