ಮತ್ತೊಂದು ಎಡವಟ್ಟು ಮಾಡಿಕೊಂಡ ಕಾಂಗ್ರೆಸ್, ದಸರಾ ಪರೇಡ್‌ನಲ್ಲಿ ಸಚಿವ ಮಹದೇವಪ್ಪ ಮೊಮ್ಮಗ ಭಾಗಿ
ಮೈಸೂರು ದಸರಾ ಪರೇಡ್‌ನಲ್ಲಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಮೊಮ್ಮಗ ಭಾಗವಹಿಸಿದ್ದು ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದೆ. ತೆರೆದ ವಾಹನದಲ್ಲಿ ಮುಖ್ಯಮಂತ್ರಿ, ಡಿಸಿಎಂ ಮತ್ತು ಸಚಿವರೊಂದಿಗೆ ಬಾಲಕ ಕಾಣಿಸಿಕೊಂಡಿದ್ದು ಪ್ರೋಟೋಕಾಲ್ ಉಲ್ಲಂಘನೆ ಪ್ರಶ್ನೆ ಎತ್ತಿದೆ. ಹೈಕಮಾಂಡ್ ರಾಜ್ಯ ನಾಯಕರಿಂದ ಸ್ಪಷ್ಟನೆ ಮತ್ತು ವರದಿ ಕೇಳಿದೆ.
ಮೈಸೂರು, ಅ.3: ಮೈಸೂರು ದಸರಾದ ಸಂದರ್ಭದಲ್ಲಿ ತೆರೆದ ವಾಹನದ ಪರೇಡ್ ನಡೆಸಲಾಗಿತ್ತು. ಈ ಪರೇಡ್‌ನಲ್ಲಿ ಸಿಎಂ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್, ಸಚಿವ ಹೆಚ್.ಸಿ. ಮಹದೇವಪ್ಪ (HC Mahadevappa) ಕೂಡ ಭಾಗಯಾಗಿದರು. ಇದು ಸರ್ಕಾರಿ ಕಾರ್ಯಕ್ರಮವಾದ ಕಾರಣ, ಈ ಪರೇಡ್‌ನಲ್ಲಿ ಸಂವಿಧಾನಿ ಹುದ್ದೆಯಲ್ಲಿ ಇರುವವರು ಮಾತ್ರ ಭಾಗವಹಿಸಬೇಕಿತ್ತು. ಆದರೆ ತೆರೆದ ವಾಹನದಲ್ಲಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಮೊಮ್ಮಗ ಭಾಗವಹಿಸಿದ್ದಾರೆ. ಇದೀಗ ಈ ವಿಚಾರ ಕಾಂಗ್ರೆಸ್ ಪಕ್ಷದ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಹಾಗೂ ಕಾಂಗ್ರೆಸ್ ಹೈಕಮಾಂಡ್‌ನ ಕೆಂಗಣ್ಣಿಗೆ ಗುರಿಯಾಗಿದೆ. ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಇತರ ಸಚಿವರೊಂದಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಂದ ತಕ್ಷಣದ ಸ್ಪಷ್ಟನೆ ಮತ್ತು ವರದಿಯನ್ನು ಕೇಳಿದೆ. ನಿನ್ನೆ ದಸರಾ ಕಾರ್ಯಕ್ರಮದ ವೇಳೆ ಅರಮನೆಯ ಮುಂಭಾಗದಲ್ಲಿ ನಡೆದ ನಂದಿ ಧ್ವಜ ಪೂಜೆ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಹಲವು ಪ್ರಮುಖ ಕಾಂಗ್ರೆಸ್ ನಾಯಕರು ತೆರೆದ ಜೀಪಿನಲ್ಲಿ ಸಾಗುತ್ತಿದ್ದರು. ಈ ವೇಳೆ, ನಾಯಕರ ಮಧ್ಯೆ ಬಾಲಕನೊಬ್ಬ ಕಾಣಿಸಿಕೊಂಡಿದ್ದು, ಇದು ಅಲ್ಲಿ ಸೇರಿದ್ದ ಜನರಿಗೆ ಮತ್ತು ಮಾಧ್ಯಮಗಳ ಗಮನ ಸೆಳೆದಿದೆ. ಆ ಬಾಲಕ ಹೆಚ್.ಸಿ. ಮಹದೇವಪ್ಪ ಅವರ ಮೊಮ್ಮಗ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮೈಸೂರು, ಬೆಂಗಳೂರು ಮಾತ್ರವಲ್ಲದೆ ದೆಹಲಿ ಮಟ್ಟದಲ್ಲೂ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ನಾಯಕರು, ಸರ್ಕಾರಿ ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರ ಭಾಗವಹಿಸುವಿಕೆ ಮತ್ತು ಮಧ್ಯಸ್ಥಿಕೆ ಏಕೆ ಹೆಚ್ಚಾಗಿ ಕಾಣಿಸುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಇರುವಂತಹ ಕಾರ್ಯಕ್ರಮದಲ್ಲಿ ಪ್ರೋಟೋಕಾಲ್ ಪಾಲನೆ ಆಗಬೇಕಿತ್ತು. ಅಲ್ಲಿ ಏನಾದರೂ ಪ್ರೋಟೋಕಾಲ್ ಉಲ್ಲಂಘನೆ ಆಗಿದೆಯೇ, ಕುಟುಂಬಸ್ಥರು ಯಾಕೆ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಹೈಕಮಾಂಡ್ ಸೂಚಿಸಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

