ಕುಕ್ಕರ್ ಬ್ಲಾಸ್ಟ್ ಪ್ರಕರಣ | ಕಾಂಗ್ರೆಸ್ ಯಾವುದೇ ಸಮುದಾಯವನ್ನು ಓಲೈಸಲು ಪ್ರಯತ್ನಿಸುತ್ತಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್
ಕಾಂಗ್ರೆಸ್ ಪಕ್ಷ ಬಸವಣ್ಣ ಮತ್ತು ಡಾ ಬಿಆರ್ ಅಂಬೇಡ್ಕರ್ ಅವರ ತತ್ವಗಳ ಪಾಲನೆ ಮಾಡಿಕೊಂಡು ಸಾರ್ವಜನಿಕವಾಗಿ ಸಕ್ರಿಯವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಕೊಪ್ಪಳ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರು ಗುರುವಾರ ಕೊಪ್ಪಳಕ್ಕೆ ಬಂದು ಹೋಗಿದ್ದನ್ನು ನಾವು ವರದಿ ಮಾಡಿದ್ದೇವೆ. ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಇಂದು ಕಾಂಗ್ರೆಸ್ ಒಂದು ಬೃಹತ್ ಸಮಾವೇಶ ಆಯೋಜಿಸಿದ್ದು ಪಕ್ಷದ ಪ್ರಮುಖ ನಾಯಕರೆಲ್ಲ ಇಲ್ಲಿಗೆ ಆಗಮಿಸಿದ್ದಾರೆ. ಇದೇ ಸಂದರ್ಭದಲ್ಲಿ ಟಿವಿ9 ಕೊಪ್ಪಳ ಪ್ರತಿನಿಧಿಯೊಂದಿಗೆ ಮಾತಾಡಿದ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರು ಮಂಗಳೂರಿನ ಕುಕ್ಕರ್ ಬ್ಲಾಸ್ಟ್ (cooker blast) ಪ್ರಕರಣವನ್ನು ಉಲ್ಲೇಖಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಆಗಲೀ ಅಥವಾ ಪಕ್ಷದ ಬೇರೆ ನಾಯಕರಾಗಲೀ ಯಾವುದೇ ಸಮುದಾಯಯವನ್ನು ಓಲೈಸಲು ಪ್ರಯತ್ನಿಸುತ್ತಿಲ್ಲ. ಕಾಂಗ್ರೆಸ್ ಪಕ್ಷ ಬಸವಣ್ಣ ಮತ್ತು ಡಾ ಬಿಆರ್ ಅಂಬೇಡ್ಕರ್ ಅವರ ತತ್ವಗಳ ಪಾಲನೆ ಮಾಡಿಕೊಂಡು ಸಾರ್ವಜನಿಕವಾಗಿ ಸಕ್ರಿಯವಾಗಿದೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Dec 16, 2022 02:46 PM
Latest Videos