ಕಾಂಗ್ರೆಸ್ ಹೈಕಮಾಂಡ್ ನಿಯಂತ್ರಿತ ಪಕ್ಷ, ಅದು ಹಾಕಿದ ಗೆರೆ ಯಾರೂ ದಾಟಲ್ಲ: ಜಮೀರ್ ಅಹ್ಮದ್, ಸಚಿವ
ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಕೇಳಿದಾಗ ಮಾತಾಡಿದ ಶಿವಲಿಂಗೇಗೌಡ, ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ನಿಂದ ಸೋಲುಂಟಾಗುತಿತ್ತು, ಇನ್ನು ಅದೇ ಪಕ್ಷದಿಂದ ನಮಗೆ ಗೆಲುವು ದಕ್ಕುತ್ತಾ ಹೋಗುತ್ತದೆ, ಜೆಡಿಎಸ್ ಗೆ ಸಿಗುತ್ತಿದ್ದ ಮತಗಳೆಲ್ಲ ಕಾಂಗ್ರೆಸ್ ಪಾಲಾಗಲಿವೆ ಎಂದು ಹೇಳಿದರು.
ಹಾಸನ: ಹಾಸನ ಜಿಲ್ಲೆ ಪ್ರವಾಸದಲ್ಲಿರುವ ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ನಗರದಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದರು. ಪಕ್ಷದ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ಸಹ ಜಮೀರ್ ಜೊತೆಗಿದ್ದರು. ಮುಖ್ಯಮಂತ್ರಿಯ ಅವಧಿ ಎಷ್ಟು ವರ್ಷ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಮೀರ್, ಕಾಂಗ್ರೆಸ್ ಪಕ್ಷ (Congress party) ಹೈಕಮಾಂಡ್ ಅಣತಿಯಂತೆ ನಡೆಯುವ ಪಕ್ಷ, ಎಲ್ಲ ತೀರ್ಮಾಮಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಪಕ್ಷದ ಸದಸ್ಯರೆಲ್ಲ ಅದಕ್ಕೆ ಬದ್ಧರಾಗಿರುತ್ತಾರೆ ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷ ತನ್ನ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ ಜನಪರ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಇಳಿಯುವುದರಿಂದ ಮುಂದಿನ 15 ವರ್ಷಗಳ ಕಾಲ ಅಧಿಕಾರ ನಡೆಸುವುದನ್ನು ಯಾರೂ ತಪ್ಪಿಸಲಾಗದು ಎಂದು ಜಮೀರ್ ಹೇಳಿದರು. ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಕೇಳಿದಾಗ ಮಾತಾಡಿದ ಶಿವಲಿಂಗೇಗೌಡ, ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ನಿಂದ ಸೋಲುಂಟಾಗುತಿತ್ತು, ಇನ್ನು ಅದೇ ಪಕ್ಷದಿಂದ ನಮಗೆ ಗೆಲುವು ದಕ್ಕುತ್ತಾ ಹೋಗುತ್ತದೆ, ಜೆಡಿಎಸ್ ಗೆ ಸಿಗುತ್ತಿದ್ದ ಮತಗಳೆಲ್ಲ ಕಾಂಗ್ರೆಸ್ ಪಾಲಾಗಲಿವೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

