Pahelgam Terror Attack: ಕೇಂದ್ರ ಸರ್ಕಾರ ಉಗ್ರರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡರೂ ಕಾಂಗ್ರೆಸ್ ಬೆಂಬಲಿಸುತ್ತದೆ: ಹರಿಪ್ರಸಾದ್

Updated on: Apr 23, 2025 | 6:09 PM

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವವರು ಪಾಕಿಸ್ತಾನದಲ್ಲಿ ತರಬೇತಿ ಪಡೆಯುತ್ತಿದ್ದಾರೆ ಅನ್ನೋದು ಸ್ಪಷ್ಟವಾಗುತ್ತಿದೆ, ಅಂದರೆ ಪಾಕಿಸ್ತಾನ ಪರೋಕ್ಷವಾಗಿ ಉಗ್ರರಿಗೆ ಕುಮ್ಮಕ್ಕು ನೀಡುತ್ತಿದೆ, ದೇಶದ ಭದ್ರತೆ ಬಹಳ ಮುಖ್ಯ ಅನ್ನೋದನ್ನು ಮನಗಂಡು ಪಾಕಿಸ್ತಾನದ ಆಶಯಗಳ ವಿರುದ್ಧ ಪ್ರತಿಭಟನೆ ನಡೆಸಬೇಕಿದೆ ಎಂದು ಹರಿಪ್ರಸಾದ್ ಹೇಳಿದರು.

ದೆಹಲಿ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯನ್ನು ಹಿರಿಯ ಕಾಂಗ್ರೆಸ್ ನಾಯಕ ಮತ್ತು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ (BK Hari Prasad) ತೀವ್ರವಾಗಿ ಖಂಡಿಸಿದ್ದಾರೆ. ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ಉಗ್ರರ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳಲು ಮಂದಾದರೂ ಕಾಂಗ್ರೆಸ್ ಅದಕ್ಕೆ ಬೆಂಬಲ ನೀಡುತ್ತದೆ, ಸಂಸದ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ನಿಲ್ಲುವನ್ನು ಸ್ಪಷ್ಟಪಡಿಸಿದ್ದಾರೆ, ಉಗ್ರರ ದಾಳಿಯನ್ನು ಪಕ್ಷಾತೀತವಾಗಿ ಖಂಡಿಸಬೇಕಿದೆ ಎಂದು ಹರಿಪ್ರಸಾದ್ ಹೇಳಿದರು.

ಇದನ್ನೂ ಓದಿ:  Pahalgam Terror Attack: ಪಹಲ್ಗಾಮ್​ನಲ್ಲಿ ಉಗ್ರರ ಗುಂಡಿನ ದಾಳಿ, 13 ಕನ್ನಡಿಗರ ಜೀವ ಉಳಿಸಿದ ಗುಡ್ಡ!

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ