ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್​ನ ಅಖಂಡ ಶ್ರೀನಿವಾಸ್ ಮೂರ್ತಿ; ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷ ಕಿಡಿ

ಪುಲಕೇಶಿ ನಗರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡ ಕ್ಷೇತ್ರದ ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಪಕ್ಷಕ್ಕೆ ಕೈ ಕೊಡಲು ಮುಂದಾಗಿದ್ದಾರೆ. ಅದರಂತೆ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್​ನ ಅಖಂಡ ಶ್ರೀನಿವಾಸ್ ಮೂರ್ತಿ; ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷ ಕಿಡಿ
|

Updated on:Apr 16, 2023 | 9:42 PM

ಬೆಂಗಳೂರು: ಪುಲಕೇಶಿ ನಗರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡ ಕ್ಷೇತ್ರದ ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ (Akhanda Srinivas Murthy), ಪಕ್ಷಕ್ಕೆ ಕೈ ಕೊಡಲು ಮುಂದಾಗಿದ್ದಾರೆ. ಅದರಂತೆ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ಅವರು, ಪಕ್ಷೇತರರಾಗಿ ಸ್ಪರ್ದೆ ಮಾಡಬೇಕು ಅಂತ ಯೋಚಿಸಿದ್ದೇನೆ. ಅಂತಿಮವಾಗಿ ನಮ್ಮ ಮುಖಂಡರು, ಜನತೆಯ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ. ಅತ್ಯಂತ ಹೆಚ್ಚು ಲೀಡ್​ನಿಂದ ಗೆದ್ದ ಶಾಸಕ ನಾನು. ಆದರೆ ನನಗೆ ಪಕ್ಷದ ನಡೆಯಿಂದ ನೋವುಂಟಾಗಿದೆ. ಮೂರನೇ ಲಿಸ್ಟ್​ನಲ್ಲೂ ನನಗೆ ಟಿಕೇಟ್ ನೀಡಲಿಲ್ಲ. ಇದರ ಹಿಂದೆ ಪಕ್ಷದ ಹಿರಿಯ ನಾಯಕರಿದ್ದಾರೆ. ಹಿರಿಯ ನಾಯಕರು ಯಾರು ಎಂದು ನೀವೇ ಅರ್ಥ ಮಾಡಿಕೊಳ್ಳಬೇಕು ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಆಕ್ರೋಶ ಹೊರಹಾಕಿದರು. ಕ್ಷೇತ್ರದಲ್ಲಿ ಹಿಂದೂ- ಮುಸ್ಲಿಂ- ಕ್ರಿಶ್ಚಿಯನ್ ಎಲ್ಲಾ ಅಣ್ಣ ತಮ್ಮಂದಿರ ರೀತಿ ಇದ್ದೇವೆ. ನನ್ನ ಬಗ್ಗೆ ಮನೆ ಮನೆಗೆ ಹೋಗಿ ಕೇಳಲಿ ಬೇಕಾದರೆ ಎಂದರು.

ಮತ್ತಷ್ಟು ವಿಡಿಯೋ ಸ್ಟೋರಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 9:42 pm, Sun, 16 April 23

Follow us