ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್ ಆಗ್ರಹ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧದ ಪ್ರಕರಣವನ್ನು ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಹೇಳಿದರು. ಮುಸ್ಲಿಮರ ಮತದಾನದ ಹಕ್ಕಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಬೆಂಗಳೂರು, ಡಿಸೆಂಬರ್ 2: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ದಾಖಲಿಸಲಾಗಿರುವ ಪ್ರಕರಣವನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಆಗ್ರಹಿಸಿದ್ದಾರೆ. ಮುಸ್ಲಿಮರ ಮತದಾನದ ಹಕ್ಕಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಸ್ವಾಮೀಜಿ ವಿರುದ್ಧದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಈಗಾಗಲೇ ಸ್ವಾಮೀಜಿಗಳು ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಭಾರತದ ಸಂವಿಧಾನ ಎಲ್ಲರಿಗೂ ಒಂದೇ ಎಂಬುದನ್ನು ಪರಮ ಪೂಜ್ಯ ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ. ಸ್ವಾಮೀಜಿಗಳು ಸಾಂದರ್ಭಿಕವಾಗಿ ಆ ಮಾತು ಆಡಿದ್ದಾಗಿ ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ, ಸರ್ಕಾರ ದೂರನ್ನು ದಾಖಲು ಮಾಡಿದೆ. ಸ್ವಾಮೀಜಿ ವಿರುದ್ಧದ ದೂರು ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ